ಆ್ಯಪ್ನಗರ

ಯಡಿಯೂರಪ್ಪ ಸಿಎಂ ಆದ್ರೆ ಸಾಕು ಅನಾವೃಷ್ಟಿ ಕಳೆದು ಅತಿವೃಷ್ಟಿ ಆಗತ್ತೆ ಎಂದ ವಿ ಸೋಮಣ್ಣ

ರಾಜ್ಯದಲ್ಲಿ ಅತಿವೃಷ್ಟಿಯಿಂದ ಎಲ್ಲ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಇದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅದೃಷ್ಟ ಎಂದು ಸಚಿವ ವಿ ಸೋಮಣ್ಣ ಹೇಳಿದರು.

Vijaya Karnataka Web 3 Sep 2019, 3:00 pm
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದರೆ ಸಾಕು ಅನಾವೃಷ್ಟಿ ನೀಗಿ ಅತಿವೃಷ್ಟಿ ಬರುತ್ತದೆ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದರು.
Vijaya Karnataka Web v somanna


ವಿಕಾಸಸೌಧದ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಅತಿವೃಷ್ಟಿಯಿಂದ ಒಂದೇ ವಾರದಲ್ಲಿ ಎಲ್ಲ ಜಲಾಶಯಗಳು ತುಂಬಿ ಹರಿಯುತ್ತಿವೆ. ಇದು ಯಡಿಯೂರಪ್ಪ ಅವರಿಂದ ಬಂದ ಅದೃಷ್ಟ ಎಂದವರು ಅಭಿಪ್ರಾಯಪಟ್ಟರು.

ಮಧ್ಯಂತರ ಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಸೋಮಣ್ಣ, 'ಸಿದ್ದರಾಮಯ್ಯ ಅವರು ಅನುಭವಿ ರಾಜಕಾರಣಿ. ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸರಕಾರ 3 ವರ್ಷ 9 ತಿಂಗಳು ಅಧಿಕಾರ ನಡೆಸುತ್ತೆ. ಸದ್ಯ ರಾಜ್ಯದ ಜನತೆ ಕೂಡ ಚುನಾವಣೆ ಬಯಸುತ್ತಿಲ್ಲ ಎಂದು ಹೇಳಿದರು.

ವಸತಿ ಇಲಾಖೆಯಲ್ಲಿ ಹಿಂದಿನ ಸರಕಾರ ಜಾರಿ ಮಾಡಿರುವ ಯಾವುದೇ ಯೋಜನೆಗಳಿಗೆ ತಡೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಎಲ್ಲ ಯೋಜನೆಗಳನ್ನು ಮುಂದುವರೆಸುತ್ತೇವೆ. ಜನರಿಗೆ ಒಳ್ಳೆಯದಾಗಬೇಕು ಅಷ್ಟೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ