ಆ್ಯಪ್ನಗರ

ಕೋವಿಡ್‌ ಲಸಿಕೆ ವಿಚಾರದಲ್ಲಿ ಪಾಲಿಟಿಕ್ಸ್‌ ಬೇಡ: ಡಿಸಿಎಂ ಅಶ್ವತ್ಥನಾರಾಯಣ

ಕೋವಿಡ್-19‌ ಲಸಿಕೆ ನೀಡುವ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮನವಿ ಮಾಡಿದ್ದಾರೆ. ಪ್ರತಿಪಕ್ಷಗಳು ಸರಕಾರಕ್ಕೆ ರಚನಾತ್ಮಕ- ಮೌಲ್ಯಯುತ ಸಲಹೆಗಳನ್ನು ನೀಡಬೇಕು ಎಂದು ಕೋರಿದ್ದಾರೆ.

Vijaya Karnataka Web 3 Jan 2021, 4:57 pm
ಬೆಂಗಳೂರು: ಕೋವಿಡ್-19‌ ಲಸಿಕೆ ನೀಡುವ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮನವಿ ಮಾಡಿದ್ದಾರೆ.
Vijaya Karnataka Web CN Ashwath Narayan


ಬೆಂಗಳೂರಿನಲ್ಲಿ ಭಾನುವಾರ ಚಿತ್ರಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಲಸಿಕೆ ನೀಡುವ ವಿಷಯದಲ್ಲಿ ಪ್ರತಿಪಕ್ಷಗಳು ಸರಕಾರಕ್ಕೆ ರಚನಾತ್ಮಕ- ಮೌಲ್ಯಯುತ ಸಲಹೆಗಳನ್ನು ನೀಡಬೇಕು ಎಂದು ಕೋರಿದರು.

ಪ್ರತಿಯೊಂದರಲ್ಲಿಯೂ ರಾಜಕೀಯ ಹುಡುಕುವುದು ಕೆಲವರಿಗೆ ಅಂಟಿರುವ ಜಾಡ್ಯ. ಅದಕ್ಕೇನು ಮಾಡಲು ಸಾಧ್ಯ? ಸಹಕಾರ ಕೊಡಿ ಎಂದಷ್ಟೇ ಸರಕಾರ ಮನವಿ ಮಾಡಲು ಸಾಧ್ಯವಷ್ಟೇ ಎಂದರು.

ಹೊಸ ವರ್ಷ ಮುನ್ನಾ ದಿನ ರಾತ್ರಿ 9ರವರೆಗೆ ಕಡತ ವಿಲೇವಾರಿ ಮಾಡಿದ ಡಿಸಿಎಂ ಅಶ್ವತ್ಥನಾರಾಯಣ

ದೇಶದಲ್ಲಿ ಕೋವಿಡ್‌ ಲಸಿಕೆ ನೀಡಲು ಭಾರತ್‌ ಬಯೋಟೆಕ್‌ಗೆ ಕೇಂದ್ರ ಸರಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಮೊದಲ ಹಂತದಲ್ಲಿ ಕೋವಿಡ್‌ ವಾರಿಯರ್ಸ್‌ಗೆ ಹಾಗೂ ಈ ಮಾರಿಯ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸುತ್ತಿರುವವರಿಗೆ ಲಸಿಕೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಕೋವಿಡ್‌ ನಡುವೆಯೂ ಆಶಾಕಿರಣ: ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ ನೀಡಲಿದೆ ಬ್ರಿಟನ್

ಭಾರತ ಅತಿ ಹೆಚ್ಚು ಜನಸಂಖ್ಯೆಯುಳ್ಳ ದೇಶವಾಗಿದ್ದು, ವ್ಯಾಕ್ಸಿನ್‌ ನೀಡಲು ಎಷ್ಟು ಕಂಪನಿಗಳು ಮುಂದೆ ಬಂದರೂ ಸಾಕಾಗುವುದಿಲ್ಲ. ಹೀಗಾಗಿ ಭಾರತ್‌ ಬಯೋಟೆಕ್‌ಗೆ ಅನುಮತಿ ನೀಡಿರುವ ಕ್ರಮ ಉತ್ತಮ ಹೆಜ್ಜೆ ಎಂದರು ಡಿಸಿಎಂ.

ತ್ವರಿತವಾಗಿ ಎಲ್ಲರಿಗೂ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡು ಭರದಿಂದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದ್ಯತೆಯ ಅನುಸಾರವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಆಗುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ