ಆ್ಯಪ್ನಗರ

ವೈದ್ಯ ಕೋರ್ಸ್‌ ಪ್ರವೇಶ ದಿನಾಂಕ ಮುಂದೂಡಿಕೆ ಇಲ್ಲ

ವೈದ್ಯ ಕೋರ್ಸ್‌ಗಳ ಪ್ರವೇಶಕ್ಕೆ ಆ.18ರ ಶನಿವಾರ ಕೊನೆಯ ದಿನವಾಗಿದ್ದು, ಯಾವುದೇ ಕಾರಣಕ್ಕೂ ದಿನಾಂಕ ಮುಂದೂಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

Vijaya Karnataka 17 Aug 2018, 9:29 am
ಬೆಂಗಳೂರು: ವೈದ್ಯ ಕೋರ್ಸ್‌ಗಳ ಪ್ರವೇಶಕ್ಕೆ ಆ.18ರ ಶನಿವಾರ ಕೊನೆಯ ದಿನವಾಗಿದ್ದು, ಯಾವುದೇ ಕಾರಣಕ್ಕೂ ದಿನಾಂಕ ಮುಂದೂಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
Vijaya Karnataka Web doctor


ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ನೆರೆ ಹಾವಳಿ, ಗುಡ್ಡಗಳ ಕುಸಿತ, ರಸ್ತೆಗಳು ಕೊಚ್ಚಿ ಹೋಗಿರುವುದೂ ಸೇರಿದಂತೆ ನಾನಾ ಕಾರಣಗಳಿಂದ ರಸ್ತೆ ಮತ್ತು ರೈಲು ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ದಿನಾಂಕ ಮುಂದೂಡುವಂತೆ ಕೆಇಎ ಸರಕಾರಕ್ಕೆ ಮನವಿ ಮಾಡಿದೆ. ಆದರೆ ಸರಕಾರ ಅಸಹಾಯಕತೆ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ದಿನಾಂಕ ಮುಂದೂಡಿಕೆ ಸಾಧ್ಯವಿಲ್ಲ ಎಂದು ಕೈ ಚೆಲ್ಲಿದೆ.

''ವೈದ್ಯ ಕಾಲೇಜುಗಳ ಪ್ರವೇಶಕ್ಕೆ ಇನ್ನೂ ಎರಡು ದಿನಗಳ ಕಾಲಾವಕಾಶವಿದ್ದು, ಪರಿಸ್ಥಿತಿ ಸುಧಾರಿಸಬಹುದು. ಆ.18ಕ್ಕೆ ಪ್ರವೇಶ ಪ್ರಕ್ರಿಯೆಗಳು ಪೂರ್ಣಗೊಂಡು, ಆ.20ರಂದು 'ಮಾಪ್‌ ಅಪ್‌' ಸೀಟು ಹಂಚಿಕೆ ಪ್ರಕ್ರಿಯೆ ನಡೆಸಬೇಕಿರುವುದರಿಂದ ದಿನಾಂಕ ಮುಂದೂಡಿಕೆ ಸಾಧ್ಯವಿಲ್ಲ,' ಎಂದು ಸರಕಾರ ತಿಳಿಸಿರುವುದಾಗಿ ಮೂಲಗಳು ಖಚಿತಪಡಿಸಿವೆ.

ಸಧ್ಯಕ್ಕೆ ಕರಾವಳಿ ಭಾಗವನ್ನು ಸಂಪರ್ಕಿಸಲು ಮಂಗಳೂರಿಗೆ ವಿಮಾನ ಮಾರ್ಗವನ್ನು ಹೊರತುಪಡಿಸಿ ಅನ್ಯಮಾರ್ಗವಿಲ್ಲ. ಆದರೆ ದುಬಾರಿ ಹಣ ನೀಡಿ ವಿಮಾನದ ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣ ಬೆಳೆಸುವುದು ಬಹುತೇಕ ವಿದ್ಯಾರ್ಥಿಗಳಿಗೆ ಅಸಾಧ್ಯವಾಗಿದೆ. ಆದ್ದರಿಂದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ