ಆ್ಯಪ್ನಗರ

ಉ.ಕಕ್ಕೆ 9 ಇಲಾಖೆಗಳ ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿ:ಹೈಕೋರ್ಟ್‌ ಸರಕಾದ ಮಾಹಿತಿ

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ರಾಜ್ಯ ಸರಕಾರದ ನಾನಾ ಇಲಾಖೆಗಳ 9 ಕಚೇರಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ...

Vijaya Karnataka 18 Sep 2019, 5:00 am
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ರಾಜ್ಯ ಸರಕಾರದ ನಾನಾ ಇಲಾಖೆಗಳ 9 ಕಚೇರಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ಸರಕಾರ ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
Vijaya Karnataka Web hamer


ವಕೀಲೆ ಸುಧಾ ಕಾಟವ ಸಲ್ಲಿಸಿದ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರಕಾರಿ ಪರ ವಕೀಲರಾದ ಬಿ.ವಿ. ಕೃಷ್ಣ, ಅರ್ಜಿಗೆ ಸಂಬಂಧ ಆಕ್ಷೇಪಣೆ ಸಲ್ಲಿಸಿ, ಪುರಾತತ್ವ ಇಲಾಖೆಯ ನಿರ್ದೇಶಕರ ಕಚೇರಿಯನ್ನು ಹಂಪಿಗೆಸ್ಥಳಾಂತರಿಸಲಾಗಿದೆ. ಆದರೆ, ಆಯೋಗದ ಆಕ್ಷೇಪದ ಹಿನ್ನೆಲೆಯಲ್ಲಿಮಾನವ ಹಕ್ಕು ಆಯೋಗದ ಒರ್ವ ಸದಸ್ಯರ ಕಚೇರಿ ಧಾರವಾಡಕ್ಕೆ ಸ್ಥಳಾಂತರಿಸುವುದನ್ನು ಕೈಬಿಡಲಾಗಿದೆ. ಉಳಿದ ಕೃಷ್ಣಾಭಾಗ್ಯ ಜಲನಿಗಮದ ಕಚೇರಿ-ಆಲಮಟ್ಟಿ, ಕರ್ನಾಟಕ ನೀರಾವರಿ ನಿಗಮ-ದಾವಣಗೆರೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ-ಬೆಳಗಾವಿ, ಸಕ್ಕರೆ ನಿರ್ದೇಶಕರು ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ-ಬೆಳಗಾವಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರತ್ಯೇಕ ಕಚೇರಿ-ಹುಬ್ಬಳ್ಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ನಂತರ ಪೀಠ ಸ್ಥಳಾಂತರದ ಆದೇಶ ಜಾರಿ ಸಂಬಂಧ ಹೆಚ್ಚುವರಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನ.4ಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ