ಆ್ಯಪ್ನಗರ

ರಾಷ್ಟ್ರೀಯ ಪೌರತ್ವ ನೋಂದಣಿ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ದೇವೇಗೌಡ

ರಾಷ್ಟ್ರೀಯ ಪೌರತ್ವ ನೋಂದಣಿ ವಿಷಯದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಲ್ಲುವುದಾಗಿ ಮಾಜಿ ಪ್ರಧಾನಿ ದೇವೇಗೌಡ ಘೋಷಿಸಿದ್ದಾರೆ...

Vijaya Karnataka 2 Aug 2018, 6:57 pm
ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ ವಿಷಯದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಲ್ಲುವುದಾಗಿ ಮಾಜಿ ಪ್ರಧಾನಿ ದೇವೇಗೌಡ ಘೋಷಿಸಿದ್ದಾರೆ.
Vijaya Karnataka Web ದೇವೇಗೌಡ
ದೇವೇಗೌಡ


ಮಮತಾ ಬ್ಯಾನರ್ಜಿ ಅವರ ಜತೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

''ಮಮತಾ ಬ್ಯಾನರ್ಜಿ ಅವರ ಜತೆ ರಾಷ್ಟ್ರೀಯ ಪೌರತ್ವ ನೋಂದಣಿ ವಿಷಯ ಕುರಿತು ಯಾವುದೇ ಚರ್ಚೆ ನಡೆಯಲಿಲ್ಲ. ಆದರೆ, ಈ ವಿಷಯದಲ್ಲಿ ನಾನು ನಿಸ್ಸಂಶಯವಾಗಿ ಮಮತಾ ಬ್ಯಾನರ್ಜಿ ಅವರ ಜತೆ ನಿಲ್ಲುವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸುವುದಕ್ಕಾಗಿ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವ ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಿತು'' ಎಂದು ಗೌಡರು ವಿವರಿಸಿದರು.

ಮಮತಾ ಬ್ಯಾನರ್ಜಿ ಮಾತನಾಡಿ, ''ದೇವೇಗೌಡರು ಹಿರಿಯ, ಗೌರವಾನ್ವಿತ ರಾಜಕಾರಣಿಯಾಗಿದ್ದು, ಜಾತ್ಯತೀತ ರಾಜಕಾರಣದಲ್ಲಿ ಅವರು ಬಹಳ ಮುಖ್ಯರಾಗಿದ್ದಾರೆ. ಇಂದು ದೇಶದಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗುವುದು ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಿದೆ. ಈ ಬಗ್ಗೆಯೂ ದೇವೇಗೌಡರ ಜತೆ ಚರ್ಚಿಸಲಾಯಿತು'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ