ಆ್ಯಪ್ನಗರ

ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ

ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪ್ರೋತ್ಸಾಹಧನ ನೀಡುವ ಮಾತೃಶ್ರೀ ಯೋಜನೆ ರಾಜ್ಯೋತ್ಸವ ದಿನವಾದ ನವೆಂಬರ್‌ 1ರಿಂದ ಅನುಷ್ಠಾನಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಹೇಳಿದರು.

Vijaya Karnataka Web 26 Sep 2018, 4:00 am
ಬೆಂಗಳೂರು: ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪ್ರೋತ್ಸಾಹಧನ ನೀಡುವ ಮಾತೃಶ್ರೀ ಯೋಜನೆ ರಾಜ್ಯೋತ್ಸವ ದಿನವಾದ ನವೆಂಬರ್‌ 1ರಿಂದ ಅನುಷ್ಠಾನಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಹೇಳಿದರು.
Vijaya Karnataka Web nutritional karnataka program
ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ


ವಿಕಾಸಸೌಧದಲ್ಲಿ ಮಂಗಳವಾರ ಇಲಾಖೆಯ 'ಪೌಷ್ಟಿಕ ಕರ್ನಾಟಕ' ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,''ಈ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಆರು ತಿಂಗಳು ಒಟ್ಟು 6 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು'' ಎಂದರು.

''ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೂ, ಅದನ್ನು ಲೆಕ್ಕಿಸದೆ ಸರಕಾರ ಯೋಜನೆಯನ್ನು ಜಾರಿಗೆ ತಂದಿದೆ. ಅಪೌಷ್ಟಿಕತೆæ, ರಕ್ತಹೀನತೆ ಹಾಗೂ ಕಡಿಮೆ ತೂಕದ ಮಕ್ಕಳ ಜನನ ಸಮಸ್ಯೆ ನಿವಾರಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದæ'' ಎಂದು ಹೇಳಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಯುನಿಸೆಫ್‌ ಹೈದರಾಬಾದ್‌ ಪ್ರಾದೇಶಿಕ ಕಚೇರಿ ಮುಖ್ಯಸ್ಥೆ ಮಿಟೆಲ್‌ ರಸ್ದಿಯಾ ಮಾತನಾಡಿ ''ಬಾಲಕಿಯರೂ ಸೇರಿ ಕರ್ನಾಟಕದ ಶೇಕಡಾ 50ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಪ್ರತಿ ಐದರಲ್ಲಿ ಎರಡು ಮಕ್ಕಳು ಸಮರ್ಪಕ ಬೆಳವಣಿಗೆ ಇಲ್ಲದೆ ಸೊರಗುತ್ತಿದ್ದಾರೆ'' ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಆಯುಷ್‌ ಸೇವೆಗಳ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌, ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಮರಿಸ್ವಾಮಿ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ