ಆ್ಯಪ್ನಗರ

ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಕೇಂದ್ರಕ್ಕೆ ಶ್ರೀರಾಮುಲು ಅಭಿನಂದನೆ

'ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ' - ಶ್ರೀರಾಮುಲು

Vijaya Karnataka Web 11 Aug 2021, 5:32 pm

ಹೈಲೈಟ್ಸ್‌:

  • ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ಅಧಿಕಾರ ರಾಜ್ಯಗಳಿಗೆ
  • ಈ ಅಧಿಕಾರವನ್ನು ಮರುಸ್ಥಾಪಿಸುವ ತಿದ್ದುಪಡಿ ವಿಧೇಯಕ ಅಂಗೀಕಾರ
  • ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮ: ಶ್ರೀರಾಮುಲು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web B Sriramulu
ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.
ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ಕ್ಕೆ ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಅವರು ಹೇಳಿದರು.

ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆರೆಸ್ಸೆಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರೆಸ್ಸೆಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರೆಸ್ಸೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.

ನನಗೆ ನೀಡಿರುವ ಖಾತೆ ಬಗ್ಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ: ಶ್ರೀರಾಮುಲು
ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ಶ್ರೀರಾಮುಲು ತಿಳಿಸಿದರು.

ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ಕೇಂದ್ರದ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರದ ದಲಿತ- ಹಿಂದುಳಿದ ಪರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ರಾಮುಲು ಮೆಚ್ಚುಗೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ