ಆ್ಯಪ್ನಗರ

'ನಳಿನ್ ಕುಮಾರ್ ಅವ್ರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ' : ಸಿದ್ದರಾಮಯ್ಯ

ಬೆಳಗ್ಗೆ ಕೊಪ್ಪಳದಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್ ಅವರು, ಕಾಂಗ್ರೆಸ್‌ನ ಓಲೈಕೆ ರಾಜಕಾರಣದಿಂದಲೇ ಈ ಜನರು ಪೊಲೀಸರು, ಮಾಧ್ಯಮದವರಿಗೆ, ಸಾರ್ವಜನಿಕರಿಗೆ ಹಾಗೂ ಜನಪ್ರತಿನಿಧಿಗಳಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಭಯ ಸೃಷ್ಟಿಸುತ್ತಿರುವ ಭಯೋತ್ಪಾದಕರ ಪರವಾಗಿ ನಿಲ್ಲುತ್ತೀರೊ? ದಲಿತ, ಸಜ್ಜನ ಶಾಸಕರ ಪರವಾಗಿ ನಿಲ್ಲುತ್ತೀರಾ ಎನ್ನುವುದನ್ನು ಸಿದ್ದರಾಮಯ್ಯನವರೇ ಹೇಳಬೇಕು ಎಂದು ಹೇಳಿದ್ದರು.

Vijaya Karnataka Web 13 Aug 2020, 4:52 pm
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಭಯ ಹುಟ್ಟಿಸುವ ಭಯೋತ್ಪಾದಕರ ಪರವಾಗಿಯೊ? ದಲಿತರ ಪರವಾಗಿಯೊ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
Vijaya Karnataka Web Siddaramaiah


'ನಿಮ್ಮ ಸೇವೆಯ ಮೂಲಕವೇ ನಿಮ್ಮ‌ ಪ್ರೀತಿಯ ಋಣ ತೀರಿಸುತ್ತೇನೆ': ಮಾಜಿ ಸಿಎಂ

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಕಟೀಲ್‌ಗೆ ಠಕ್ಕರ್ ನೀಡಿರುವ ಸಿದ್ದರಾಮಯ್ಯ, ‘ನಳಿನ್ ಕುಮಾರ್ ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ.


'ಸಿದ್ದರಾಮಯ್ಯನವರೇ ನೀವು ಭಯೋತ್ಪಾದಕರ ಪರವೋ ಅಥವಾ ದಲಿತರ ಪರವೋ?': ನಳೀನ್‌

ಬೆಳಗ್ಗೆ ಕೊಪ್ಪಳದಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್ ಅವರು, ಕಾಂಗ್ರೆಸ್‌ನ ಓಲೈಕೆ ರಾಜಕಾರಣದಿಂದಲೇ ಈ ಜನರು ಬೆಳೆಯುತ್ತಿದ್ದಾರೆ. ಪೊಲೀಸರು, ಮಾಧ್ಯಮದವರಿಗೆ, ಸಾರ್ವಜನಿಕರಿಗೆ ಹಾಗೂ ಜನಪ್ರತಿನಿಧಿಗಳಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಭಯ ಸೃಷ್ಟಿಸುತ್ತಿರುವ ಭಯೋತ್ಪಾದಕರ ಪರವಾಗಿ ನಿಲ್ಲುತ್ತೀರೊ? ದಲಿತ, ಸಜ್ಜನ ಶಾಸಕರ ಪರವಾಗಿ ನಿಲ್ಲುತ್ತೀರಾ ಎನ್ನುವುದನ್ನು ಸಿದ್ದರಾಮಯ್ಯನವರೇ ಹೇಳಬೇಕು ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ