ಆ್ಯಪ್ನಗರ

ಟೆಲಿಫೋನ್ ಕದ್ದಾಲಿಕೆ ಪ್ರಕರಣ: ತನಿಖೆ ವಿರೋಧಿಸಿ ಮಾಡಿದ್ದ ಕೆಪಿಸಿಸಿ ಟ್ವೀಟ್ ಡಿಲೀಟ್

ಕುಮಾರಸ್ವಾಮಿ ನೇತತ್ವದ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಡೆಯಿತೆನ್ನಲಾದ ಪ್ರಕರಣವನ್ನು ಬಿಜೆಪಿ ಸರಕಾರ ಸಿಬಿಐಗೆ ಒಪ್ಪಿಸಿದೆ.

Vijaya Karnataka Web 18 Aug 2019, 2:33 pm
ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದನ್ನು ವಿರೋಧಿಸಿ ಕೆಪಿಸಿಸಿ ಮಾಡಿದ್ದ ಟ್ವೀಟ್‌ ಡಿಲಿಟ್ ಆಗಿದೆ.
Vijaya Karnataka Web Siddramaiah


ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ತಾನು ಕಳ್ಳ ಪರರ ನಂಬ ಎಂತಂತೆ ನಿಮ್ಮ ವರ್ತನೆ, ಆಪರೇಶನ್ ಕಮಲ ಮುಖೇನ ಸರಕಾರವನ್ನು ಬೀಳಿಸಿ, ಹಿಂಬಾಗಿಲ ಅನೈತಿಕ ಸಿಎಂ ಆಗಿರುವ ತಾವು ಭೂಗತ ಪಾತಕಿಗಳ ರೀತಿ ವರ್ತಿಸುತ್ತಿದ್ದೀರಿ. ಮೋದಿ ಆಳ್ವಿಕೆಯಲ್ಲಿ ಸಿಬಿಐ ಬಿಜೆಪಿ ಮುಂಚೂಣಿ ಘಟಕವಾಗಿ ಕೆಲಸ ಮಾಡುತ್ತಿದೆ. ಫೋನ್ ಕದ್ದಾಲಿಕೆ ಎಂಬುದೊಂದು ಸುಳ್ಳು, ದ್ವೇಷ ರಾಜಕಾರಣದ ಸಂಚು ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು.


ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ, ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.


ಅದರ ಜತೆಗೆ, ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ.ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಸಿಎಂ ಅವರಲ್ಲಿ ಅವರನ್ನು ಆಗ್ರಹಿಸುತ್ತೇನೆ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ