ಆ್ಯಪ್ನಗರ

ಪಿಎಫ್‌ಐ, ಎಸ್‌ಡಿಪಿಐ ನಿಷೇಧಕ್ಕೆ ಕೇಂದ್ರಕ್ಕೆ ಪತ್ರ - ಎನ್. ರವಿಕುಮಾರ್ ಹೇಳಿಕೆ

ಉತ್ತರ ಪ್ರದೇಶ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ 120 ಕೋಟಿ ಹಣ ಸಂದಾಯವಾದ ಹಿನ್ನೆಲೆ ಹಾಗೂ ಕಾನೂನು ವಿರೋಧಿ ಚಟುವಟಿಕೆಯಲ್ಲಿ ಆರೋಪಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌ ರವಿಕುಮಾರ್ ಪಿಎಫ್‌ಐ ನಿಷೇಧಕ್ಕೆ ಒತ್ತಾಯಿಸಿದ್ದಾರೆ.

Vijaya Karnataka Web 28 Jan 2020, 5:40 pm
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಕೇಂದ್ರ ಪತ್ರ ಬರೆಯುವ ಮೂಲಕ ಒತ್ತಾಯಿಸಲಾಗುವುದು ಎಂದರು.
Vijaya Karnataka Web popular front of india should ban says bjp leader n ravikumar
ಪಿಎಫ್‌ಐ, ಎಸ್‌ಡಿಪಿಐ ನಿಷೇಧಕ್ಕೆ ಕೇಂದ್ರಕ್ಕೆ ಪತ್ರ - ಎನ್. ರವಿಕುಮಾರ್ ಹೇಳಿಕೆ


ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಫ್‌ಐ ಹಾಗೂ ಎಸ್‌ಡಿಪಿಐ ನಿಷೇಧಕ್ಕೆ ದೇಶಾದ್ಯಂತ ಒತ್ತಾಯಗಳು ಹೆಚ್ಚಾಗುತ್ತಿವೆ. ಈ ಎರಡು ಸಂಘಟನೆಗಳ ಮೂಲ ಬೇರು ನಿಷೇಧಿತ ಸಿಮಿ ಸಂಘಟನೆಯಾಗಿದೆ. ಸಿಮಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ನಿಷೇಧಕ್ಕೆ ಒಳಗಾಗಿದೆ.

ಇದೀಗ ಸಿಮಿ ಕಾರ್ಯಕರ್ತರು ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ಸಹಿಸಲು ಸಾಧ್ಯವಾಗದೆ ಪಿಎಫ್‌ಐ ಎಸ್‌ಡಿಪಿಐ ಕಾರ್ಯಕರ್ತರು ಸಿಎಎಯನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ತನ್ವೀರ್ ಸೇಠ್ ಹತ್ಯಾ ಯತ್ನ ಪ್ರಕರಣ; ಪಿಎಫ್ಐ ನಿಷೇಧಕ್ಕೆ ಶಿಫಾರಸು?

ಪಿಎಫ್‌ಐ ಸಂಘಟನೆಗೆ ಈ ಚಟುವಟಿಕೆ ನಡೆಸಲು ಬೇರೆ ಬೇರೆ ಮುಸ್ಲಿಂ ರಾಷ್ಟ್ರಗಳಿಂದ 120 ಕೋಟಿ ಹಣ ಸಂದಾಯವಾಗಿದೆ. ಈ ಹಣ ಸಿಎಎ ವಿರೋಧಿ ಚಟುವಟಿಕೆಗಳಿಗೆ ಹಾಗೂ ಕಾಂಗ್ರೆಸ್‌ಗೆ ಹರಿದುಹೋಗಿದೆ. ಇದರ ಕುರಿತಾಗಿ ಸೂಕ್ತ ತನಿಖೆಯನ್ನು ಕೇಂದ್ರ ಸರಕಾರ ಮಾಡಬೇಕು ಎಂದು ರವಿಕುಮಾರ್ ಒತ್ತಾಯಿಸಿದರು.

ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ 23 ಕಾರ್ಯಕರ್ತರನ್ನು ಕೊಂದ ಆರೋಪ ಇವರ ಮೇಲಿದೆ. ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆಯಲ್ಲಿ ಕೇರಳ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪೊಲೀಸರನ್ನು ಕೊಲ್ಲಲು ಷಡ್ಯಂತ್ರ ರೂಪಿಸಿದ್ದರು.

ಈ ನಿಟ್ಟಿನಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಡು ಎಂದು ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು, ಸಿಎಂ ಬಿಎಸ್‌ವೈಗೂ ಈ ಸಂಘಟನೆಯನ್ನು ಬ್ಯಾನ್‌ ಮಾಡಲು ಕೇಂದ್ರಕ್ಕೆ ಶಿಫಾರಸು ಕಲುಹಿಸಬೇಕು ಎಂದು ಒತ್ತಾಯ ಮಾಡಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ