ಆ್ಯಪ್ನಗರ

ಐಟಿ ಕಚೇರಿ ಎದುರು ಪ್ರತಿಭಟನೆ, ದೂರು ಪೊಲೀಸ್‌ ಇಲಾಖೆಗೆ

ಆದಾಯ ತೆರಿಗೆ ಇಲಾಖೆ ಕಾರ್ಯವೈಖರಿ ಖಂಡಿಸಿ ಐಟಿ ಕಚೇರಿ ಎದುರು ಮುಖ್ಯಮಂತ್ರಿ ಎಚ್‌...

Vijaya Karnataka 3 May 2019, 5:00 am
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಕಾರ್ಯವೈಖರಿ ಖಂಡಿಸಿ ಐಟಿ ಕಚೇರಿ ಎದುರು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿದಂತೆ ಕೇಸ್‌ ದಾಖಲಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ಪೊಲೀಸ್‌ ಇಲಾಖೆ ವರ್ಗಾಯಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Vijaya Karnataka Web hamer


ಎ. ಮಲ್ಲಿಕಾರ್ಜುನ ಎಂಬುವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಮುಂದಿನ ಕ್ರಮಕ್ಕಾಗಿ ಪೂರ್ವ ವಿಭಾಗ ಡಿಸಿಪಿ ರಾಹುಲ್‌ ಕುಮಾರ್‌ ಅವರ ಕಚೇರಿಗೆ ವರ್ಗಾಯಿಸಿದರು.

ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಸೇರಿದಂತೆ ಇನ್ನಿತರರು ಹಾಗೂ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಅದೇ ದಿನ ಸೂಕ್ತ ಕ್ರಮ ಕೈಗೊಳ್ಳದ ಪೊಲೀಸರನ್ನು ಕೂಡ ಆರೋಪಿಗಳನ್ನಾಗಿ ಮಾಡಬೇಕೆಂದು ದೂರು ಅರ್ಜಿಯಲ್ಲಿ ಮಲ್ಲಿಕಾರ್ಜುನ ಕೋರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ