ಆ್ಯಪ್ನಗರ

ಪುಟ್ಟರಂಗ ಶೆಟ್ಟಿ ವಜಾಕ್ಕೆ ಪೂಜಾರಿ ಆಗ್ರಹ

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಆಪ್ತ ಸಿಬ್ಬಂದಿಯಿಂದ ಹಣ ವಶಪಡಿಸಿಕೊಂಡ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು...

Vijaya Karnataka 9 Jan 2019, 5:00 am
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಆಪ್ತ ಸಿಬ್ಬಂದಿಯಿಂದ ಹಣ ವಶಪಡಿಸಿಕೊಂಡ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಜತೆಗೆ ಪುಟ್ಟರಂಗ ಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.
Vijaya Karnataka Web kota


ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ''ಸಮ್ಮಿಶ್ರ ಸರಕಾರದ ಅವಧಿಯಲ್ಲಿ ವಿಧಾನಸೌಧ ಭ್ರಷ್ಟಾಚಾರದ ಕೂಪವಾಗುತ್ತಿರುವುದಕ್ಕೆ ಈ ಘಟನೆಯೇ ಸಾಕ್ಷಿ. ಈ ಬಗ್ಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೂ ಬಾಯಿ ಬಿಡುತ್ತಿಲ್ಲ. ಆರೋಪಿಗಳನ್ನು ರಕ್ಷಿಸಲು ಮುಂದಾಗಿರುವ ಅನುಮಾನವಿದೆ,'' ಎಂದು ಆಪಾದಿಸಿದರು.

''ಗಂಗಾ ಕಲ್ಯಾಣ ಯೋಜನೆಯ 29 ಪ್ಯಾಕೇಜ್‌ಗಳನ್ನು 12 ಪ್ಯಾಕೇಜ್‌ಗೆ ಇಳಿಸಿ ತಮಗೆ ಬೇಕಾದವರಿಗೆ ಗುತ್ತಿಗೆ ಕೊಡಿಸಲು ಸಚಿವ ಪುಟ್ಟರಂಗ ಶೆಟ್ಟಿ ಹೊರಟಿದ್ದರು. ಈ ಉದ್ದೇಶಕ್ಕೆ ಗುತ್ತಿಗೆದಾರರಿಂದ ಹಣ ಪಡೆದಿದ್ದರು,'' ಎಂಬ ಆರೋಪವಿದೆ ಎಂದರು.

''ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲು ಕಲ್ಪಿಸುವ ಕೇಂದ್ರ ಸರಕಾರದ ನಿರ್ಧಾರ ಸ್ವಾಗತಾರ್ಹ. ರಾಜಕೀಯ ಕಾರಣಕ್ಕೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ,''ಎಂದು ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ