ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರಾಗಿ ಬಿ.ಜೆ.ಪುಟ್ಟಸ್ವಾಮಿ ಮುಂದುವರಿಕೆ
ವಿಧಾನ ಪರಿಷತ್ತಿಗೆ ಮರು ಪ್ರವೇಶ ಪಡೆಯುವಲ್ಲಿ ವಿಫಲರಾಗಿ ಅಸಮಾಧಾನಗೊಂಡು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿ.ಜೆ.ಪುಟ್ಟಸ್ವಾಮಿ ಹಿಂಪಡೆದಿದ್ದಾರೆ.
Vijaya Karnataka 21 Aug 2018, 8:10 am
ಬೆಂಗಳೂರು: ವಿಧಾನ ಪರಿಷತ್ತಿಗೆ ಮರು ಪ್ರವೇಶ ಪಡೆಯುವಲ್ಲಿ ವಿಫಲರಾಗಿ ಅಸಮಾಧಾನಗೊಂಡು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿ.ಜೆ.ಪುಟ್ಟಸ್ವಾಮಿ ಹಿಂಪಡೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಸೋಮವಾರ ಪ್ರಕಟಣೆ ನೀಡಿ, ''ರಾಜೀನಾಮೆ ವಾಪಸ್ ಪಡೆದಿರುವುದರಿಂದ ಪುಟ್ಟಸ್ವಾಮಿ ಅವರೇ ಮುಂದುವರಿಯುತ್ತಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರು ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಜಯಕ್ಕೆ ಶ್ರಮಿಸಲಿದ್ದಾರೆ,'' ಎಂದು ತಿಳಿಸಿದ್ದಾರೆ.