ಆ್ಯಪ್ನಗರ

ಪಿಡಬ್ಲ್ಯುಡಿಯಿಂದ ರಸ್ತೆ ಸಂಚಾರ ಸಮೀಕ್ಷೆ 20ರಿಂದ

ರಾಜ್ಯ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯರಸ್ತೆ(ಎಂಡಿಆರ್‌)ಗಳಲ್ಲಿ ಚಲಿಸುವ ವಾಹನಗಳ ಸಂಚಾರ ...

Vijaya Karnataka Web 18 Feb 2019, 5:00 am
ಬೆಂಗಳೂರು: ರಾಜ್ಯ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯರಸ್ತೆ(ಎಂಡಿಆರ್‌)ಗಳಲ್ಲಿ ಚಲಿಸುವ ವಾಹನಗಳ ಸಂಚಾರ ಸಮೀಕ್ಷೆಯನ್ನು ಫೆ.20ರಿಂದ ಎರಡು ದಿನಗಳ ಕಾಲ ನಡೆಸಲಾಗುತ್ತದೆ.
Vijaya Karnataka Web road.jpg


2019ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆ ಭಾಗವಾಗಿ ಕೈಗೊಂಡಿರುವ ಈ ಕಾರ್ಯಕ್ರಮದಡಿ ಫೆ.21ರ ಬೆ.6ರಿಂದ ಫೆ.22ರ ಬೆ.6ರ ವರೆಗೆ ನಿರಂತರವಾಗಿ ನಡೆಯಲಿದೆ. ಈ ಸಮೀಕ್ಷೆಗೆ ರಾಜ್ಯದೆಲ್ಲೆಡೆ 3,556 ಗಣತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಮೀಕ್ಷೆಯಿಂದ ವಾಹನ ಸಂಚಾರದ ಬೆಳವಣಿಗೆಯ ತೀವ್ರತೆ ಗಮನಿಸಿ ರಸ್ತೆಗಳ ಮೇಲ್ಮೈ ಅಭಿವೃದ್ಧಿ, ರಸ್ತೆ ವಿಸ್ತರಣೆ ಹಾಗೂ ಮೇಲ್ದರ್ಜೆ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ. ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಆಯಾ ಕೇಂದ್ರಗಳಲ್ಲಿ ಸಹಾಯಕ ಎಂಜಿನಿಯರ್‌ ಹಾಗೂ ಕಿರಿಯ ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್‌(ಸಂಪರ್ಕ ಹಾಗೂ ಕಟ್ಟಡಗಳು-ದಕ್ಷಿಣ ವಿಭಾಗ) ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ