ಆ್ಯಪ್ನಗರ

ರಾಜ್ಯದಲ್ಲಿ ಉತ್ತಮ ಹಿಂಗಾರು ಸಾಧ್ಯತೆ: ಈ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌!

ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ನವೆಂಬರ್ 5 ಮತ್ತು 6 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

Vijaya Karnataka Web 5 Nov 2020, 9:51 am
ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ಮತ್ತು ಶುಕ್ರವಾರ ಸಾಧಾರಣ ಅಥವಾ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Vijaya Karnataka Web rains
Representative image


ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಉತ್ತಮ ಹಿಂಗಾರು ಮಳೆ ಆಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ನವೆಂಬರ್ 5 ಮತ್ತು 6 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಹಾಗೂ ಬೆಂಗಳೂರಿನಲ್ಲಿ ನ.5 ರಂದು ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಧಾರವಾಡ : ಹಿಂಗಾರು ಹಂಗಾಮಿಗೆ ರೆಡಿ !

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಸುಳ್ಯದಲ್ಲಿ 2 ಸೆಂ.ಮೀ. ಹಾಗೂ ಭಾಗಮಂಡಲದಲ್ಲಿ 1 ಸೆಂ.ಮೀ. ಮಳೆಯಾಗಿದೆ.

ಹೊಲದಲ್ಲಿಯೇ ಮೊಳಕೆಯೊಡೆದ ಭತ್ತ; ಉತ್ತಮ ಫಸಲು ಬಂದರೂ ಕೊಯ್ಲಿಗೆ ಅಡ್ಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ