ಆ್ಯಪ್ನಗರ

ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ; ಭಾರಿ ಮಳೆ, ಸಿಡಿಲಿಗೆ ಇಬ್ಬರ ಬಲಿ

ರಾಜಧಾನಿ ಸುತ್ತಮುತ್ತ ಆಲಿಕಲ್ಲು ಮಳೆ

Vijaya Karnataka Web 2 Apr 2018, 5:54 pm
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ.
Vijaya Karnataka Web rain in bangalore and other parts
ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ; ಭಾರಿ ಮಳೆ, ಸಿಡಿಲಿಗೆ ಇಬ್ಬರ ಬಲಿ


ಚಿಕ್ಕಬಳ್ಳಾಪುರದಲ್ಲಿ ಸಿಡಿಲು ಬಡಿದು ಇಬ್ಬರ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ರಾಮನೊಡ್ಡಂಪಲ್ಲಿ ಗ್ರಾಮದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅರಳಿಕಟ್ಟೆ ಮೇಲೆ ಕುಳಿತಿದ್ದಾಗ ಸಿಡಿಲು ಬಡಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತರನ್ನು ಸದಾಶಿವ, ನರಸಿಂಹಪ್ಪ ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಸಂಜೆ ಭಾರಿ ಮಳೆಯಾಗಿದೆ.

ಸೋಮವಾರ ಸಂಜೆ ಮಳೆ ಬಿದ್ದ ಪರಿಣಾಮ ವಾಹನ ಸವಾರರು ತೀವ್ರ ಪರದಾಡಿದರು. ಮೆಜೆಸ್ಟಿಕ್‌, ಶಾಂತಿನಗರ, ಹಲಸೂರು, ಎಂಜಿ ರಸ್ತೆ ಸೇರಿದಂತೆ ಹಲವೆ ಮಳೆ ಸುರಿಯಿತು.

ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ರಾಮನಗರ, ಚಿಕ್ಕಬಳ್ಳಾಪುರ, ಬಂಗಾರಪೇಟೆ, ಕೋಲಾರ,ಕುಣಿಗಲ್‌, ಹಾಸನದಲ್ಲಿ ಭಾರಿ ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ