ಆ್ಯಪ್ನಗರ

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಮಳೆಯ ಅಬ್ಬರ! ಆತಂಕದಲ್ಲಿ ಜನರು

ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆರಾಯನ ಅಬ್ಬರ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ.

Vijaya Karnataka Web 6 Aug 2020, 2:08 pm
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಈಗಾಗಲೇ ಹಲವು ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾನವಾಗಿದ್ದು ಮಳೆ ಮುಂದುವರಿದರೆ ಮತ್ತಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗುವ ಸಾಧ್ಯತೆ ಇದೆ.
Vijaya Karnataka Web rain


ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ: ಆ.11 ರವರೆಗೆ ರೆಡ್‌ ಅಲರ್ಟ್‌ ಘೋಷಣೆ!

ಎಲ್ಲೆಲ್ಲಿ ಮಳೆ

ಕರಾವಳಿ ಭಾಗ: ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಾರಿ ಮಳೆಯಾಗುವುದು ಮುನ್ಸೂಚನೆ ಇದೆ.

ಮಲೆನಾಡು ಭಾಗ: ಈ ಪ್ರದೇಶದ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಎರಡು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿ ಸಾಕಷ್ಟು ಪ್ರಮಾಣದ ಹಾನಿ ಸಂಭವಿಸಿತ್ತು.

ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ: ಆ.11 ರವರೆಗೆ ರೆಡ್‌ ಅಲರ್ಟ್‌ ಘೋಷಣೆ!

ಉತ್ತರ ಒಳನಾಡು: ಈ ಪ್ರದೇಶದ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಹಾಗೂ ಕಲಬುರಗಿಯಲ್ಲಿ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು: ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮಾಹಿತಿಯನ್ನು ಕಂದಾಯ ಸಚಿವ ಆರ್‌. ಅಶೋಕ್ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ