ಆ್ಯಪ್ನಗರ

ಸುಮಾರು 41 ಸಾವಿರ ಮಂದಿಯಿಂದ ರಾಜಭವನ ವೀಕ್ಷಣೆ

ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ, ಕಳೆದ ಹದಿನೈದು ದಿನಗಳಿಂದ ಸುಮಾರು 41,600ಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ...

Vijaya Karnataka 1 Sep 2019, 5:00 am
ಬೆಂಗಳೂರು: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ, ಕಳೆದ ಹದಿನೈದು ದಿನಗಳಿಂದ ಸುಮಾರು 41,600ಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ವೀಕ್ಷಿಸಿದ್ದಾರೆ.
Vijaya Karnataka Web 3108-2-2-000SS0A (6)


ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡವರಿಗೆ ರಾಜಭವನದ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ, ಕೇವಲ ಬೆಂಗಳೂರಿಗರಷ್ಟೇ ಅಲ್ಲದೆ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೊಡಗು, ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳ ಜನರು ಭೇಟಿ ನೀಡಿದ್ದರು. ಜತೆಗೆ ಕೇರಳ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ತಮಿಳು ನಾಡು ಸೇರಿದಂತೆ, ಬ್ರೆಜಿಲ್‌, ಇಂಗ್ಲೆಂಡ್‌ ದೇಶಗಳ ಪ್ರವಾಸಿಗರು ಸಹ ರಾಜಭವನದ ವೈಭವವನ್ನು ಕಣ್ತುಂಬಿಕೊಂಡಿದ್ದಾರೆ. ಪ್ರಮುಖವಾಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಸಾರ್ವಜನಿಕರ ವೀಕ್ಷಣಗೆ ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ರಾಜಭವನವನ್ನು ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಪ್ರತಿದಿವಸ ಬಗೆಬಗೆಯ ಹೂಗಳಿಂದ ಅಲಂಕಾರ, ಗಾಜಿನ ಮನೆಯಲ್ಲಿ ಮೈಸೂರು ಪೊಲೀಸ್‌ ಸಾಂಪ್ರದಾಯಿಕ ಬ್ಯಾಂಡ್‌ ಹಾಗೂ ರಾಜಭವನದ ಬಗ್ಗೆ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ರಾಜಭವನದ ವೈಭವಕ್ಕೆ ಮನಸೋತ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ರಾಜ್ಯಪಾಲರಿಗೆ ಧನ್ಯವಾದ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ