ಆ್ಯಪ್ನಗರ

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವಯನ್ನು ಪರಿಗಣಿಸಿ 'ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ ' ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ. 'ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ' ಎಂದು ಅವರು ಹೇಳಿದ್ದಾರೆ.

Edited byಸಿನಾನ್\u200c ಇಂದಬೆಟ್ಟು | Vijaya Karnataka Web 3 Jun 2022, 11:32 am
ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web ರಕ್ಷಾ ರಾಮಯ್ಯ


ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವಯನ್ನು ಪರಿಗಣಿಸಿ 'ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ ' ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಯುವ ಕಾಂಗ್ರೆಸ್‌ ನಾಯಕತ್ವ ನಲಪಾಡ್‌ಗೆ; ರಾಷ್ಟ್ರ ಸಂಘಟನೆಗೆ ರಕ್ಷಾ ರಾಮಯ್ಯ?
'ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ' ಎಂದು ಅವರು ಹೇಳಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, 'ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ' ಎಂದು ಹೇಳಿದ್ದಾರೆ.

ಡಿಕೆಶಿ V/S ಎಂಬಿ ಪಾಟೀಲ್‌: ರಾಹುಲ್ ಗಾಂಧಿ ಸೂಚನೆಯಂತೆ ವಿವಾದಕ್ಕೆ ಬ್ರೇಕ್‌!
ಒಂದು ವರ್ಷ ರಕ್ಷಾ ರಾಮಯ್ಯ ಭಾರತೀಯ ಯುವ ಕಾಂಗ್ರೆಸ್‌ನ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ಅವರ ಸ್ಥಾನದಲ್ಲಿ ಮೊಹಮ್ಮದ್‌ ನಲಪಾಡ್‌ ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ