ಆ್ಯಪ್ನಗರ

ಸಚಿವ ಸ್ಥಾನಕ್ಕೆ ರಿಸೈನ್‌ ಮಾಡಿದ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರದಲ್ಲಿ ಹೇಳಿದ್ದೇನು?

ರಮೇಶ್ ಜಾರಕಿಹೊಳಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ‘ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿದೆ’ ಎಂದು ಹೇಳಿದ್ದು, ಈ ಬಗ್ಗೆ ಶೀಘ್ರದಲ್ಲೇ ತನಿಖೆ ನಡೆಸಬೇಕು , ನಾನು ನಿರ್ದೋಷಿಯಾಗುವ ವಿಶ್ವಾಸ ಇದೆ. ಹೀಗಿದ್ದರೂ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 3 Mar 2021, 2:30 pm

ಹೈಲೈಟ್ಸ್‌:

  • ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣ
  • ರಮೇಶ್ ಜಾರಕಿಹೊಳಿಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ
  • ರಾಜೀನಾಮೆ ಪತ್ರವನ್ನು ಸಿಎಂಗೆ ರವಾನಿಸಿದ ಜಾರಕಿಹೊಳಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ramesh Jarkiholi
ಬೆಂಗಳೂರು: ರಾಸಲೀಲೆ ವಿಡಿಯೋ ಬಹಿರಂಗಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪವನ್ನು ಮೈಮೇಲೆ ಎಳೆದುಕೊಂಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸುಧೀರ್ಘವಾಗಿ ಯೋಚಿಸಿ ನಿರ್ಧಾರ ಕೈಗೊಂಡಿರುವ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಿಎಂ ಬಿಎಸ್‌ ಯಡಿಯೂರಪ್ಪನವರಿಗೆ ರವಾನಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ‘ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿದೆ’ ಎಂದು ಹೇಳಿದ್ದು, ಈ ಬಗ್ಗೆ ಶೀಘ್ರದಲ್ಲೇ ತನಿಖೆ ನಡೆಸಬೇಕು , ನಾನು ನಿರ್ದೋಷಿಯಾಗುವ ವಿಶ್ವಾಸ ಇದೆ. ಹೀಗಿದ್ದರೂ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ: ಬಾಲಚಂದ್ರ ಜಾರಕಿಹೊಳಿಗೆ ಸ್ಥಾನ..?
ನಿನ್ನೆ ಸಂಜೆ ಯುವತಿಯೊಂದಿಗಿನ ರಾಸಲೀಲೆ ವಿಡಿಯೋ ಬಹಿರಂಗಗೊಂಡಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ಪ್ರಸ್ತಾಪವಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ವಿರುದ್ಧ ರಾಜ್ಯದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ