ಆ್ಯಪ್ನಗರ

ಒಗ್ಗಟ್ಟು ಪ್ರದರ್ಶಿಸಿ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ ಅತೃಪ್ತ ಶಾಸಕರು

ದೋಸ್ತಿ ಸರಕಾರದ ಅತೃಪ್ತ ಶಾಸಕರು ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ್ದು, ಯಾವುದೇ ಕಾರಣಕ್ಕೂ ವಾಪಸ್ ಬರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Vijaya Karnataka Web 21 Jul 2019, 5:11 pm
ಬೆಂಗಳೂರು: ಮುಂಬಯಿನಲ್ಲಿ ವಾಸ್ತವ್ಯ ಹೂಡಿರುವ ದೋಸ್ತಿ ಸರಕಾರದ 13 ಅತೃಪ್ತ ಶಾಸಕರು ಅಜ್ಞಾತ ಸ್ಥಳದಿಂದ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಪತನವಾಗುವವರೆಗೂ ನಾವು ವಾಪಸ್ ಬರಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಅತೃಪ್ತ ಶಾಸಕರು ಬದುಕಿದ್ದಾರೋ, ಸತ್ತಿದ್ದಾರೋ ಎಂಬ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಎಸ್ ಟಿ ಸೋಮಶೇಖರ್, ಎಂಟಿಬಿ ನಾಗರಾಜ್ ಮತ್ತು ನಾರಾಯಣಗೌಡರ ಹುಟ್ಟುಹಬ್ಬವನ್ನು ಒಗ್ಗಟ್ಟಿನಿಂದ ಆಚರಿಸುತ್ತಿದ್ದೇವೆ. ನಾವು 13 ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ನಾವು ಬದುಕಿದ್ದೇವೆ. ಆರೋಗ್ಯವಾಗಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಹೇಳಿದಂತೆ ಯಾರು ಕೂಡ ಗನ್‌ ಪಾಯಿಂಟ್ ಇಟ್ಟು ನಮ್ಮನ್ನು ಹಿಡಿದಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಸದನಕ್ಕೆ ಬರಲ್ಲ. ಸಮ್ಮಿಶ್ರ ಸರಕಾರದ ಹೆಸರಿನಲ್ಲಿ ರಾಕ್ಷಸ ಸರಕಾರ ಆಡಳಿತ ನಡೆಸುತ್ತಿದೆ. ಈ ಸರಕಾರದಿಂದ ಜನತೆಗೆ ಯಾವುದೇ ಅನುಕೂಲವಿಲ್ಲ. ಜನತಂತ್ರ ರಕ್ಷಿಸಲು ಮತ್ತು ಸಮ್ಮಿಶ್ರ ಸರಕಾರ ತೊಲಗಿಸಲು ರಾಜೀನಾಮೆ ನೀಡಿದ್ದೇವೆ ಎಂದು ಎಚ್ ವಿಶ್ವನಾಥ್ ಹೇಳಿಕೊಂಡಿದ್ದಾರೆ.

ನಮ್ಮಲ್ಲಿ ಸ್ವಾಭಿಮಾನದ ಕಿಚ್ಚು ಹೆಚ್ಚಿದೆ. ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್ಕೆ ರಾಜೀನಾಮೆ ನೀಡಿದ್ದೇವೆ ಹೊರತು, ಹಣ ಹಾಗೂ ಅಧಿಕಾರದ ಆಸೆಗಲ್ಲ. ನಮಗೆ ದೇವರು ಬೇಕಾದಷ್ಟು ಹಣ ನೀಡಿದ್ದಾನೆ. ಹಣದ ಆಸೆಗೆ ರಾಜೀನಾಮೆ ನೀಡುವವರಲ್ಲ ನಾವು ಎಂದು ಭೈರತಿ ಬಸವರಾಜ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ