ಆ್ಯಪ್ನಗರ

ದೇವಾಲಯಕ್ಕೆ ಬರುತ್ತಿದ್ದ ಆದಾಯದಲ್ಲಿ ಇತ್ತೀಚೆಗೆ ಬಹಳಷ್ಟು ನಷ್ಟ ಉಂಟಾಗಿದೆ; ಶಶಿಕಲಾ ಜೊಲ್ಲೆ

ಕೋವಿಡ್‌ನಿಂದಾಗಿ ದೇವಾಲಯಗಳು ಬಂದ್‌ ಆಗಿರುವುದರಿಂದ ದೇವಾಲಯಕ್ಕೆ ಬರುತ್ತಿದ್ದ ಆದಾಯದಲ್ಲಿ ಬಹಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ, ಕೋವಿಡ್‌ ಸೋಂಕಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆ ಆಗಿರುವ ಜಿಲ್ಲೆಗಳ ದೇವಾಲಯಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಚಿಂತನೆ ಮಾಡಲಾಗಿದೆ. ಈ ಕುರಿತು ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Vijaya Karnataka 13 Sep 2021, 8:59 am
ದೊಡ್ಡ ಬಳ್ಳಾಪುರ: ದೇವಾಲಯಗಳ ಸುತ್ತಮುತ್ತ ಒತ್ತುವರಿಯಾಗಿರುವ ಭೂಮಿಯನ್ನು ಶೀಘ್ರವೇ ಸರ್ವೆ ನಡೆಸಿ ವಶಪಡಿಸಿಕೊಳ್ಳಲಾಗುವುದು. ಅಲ್ಲದೆ, ಮುಜರಾಯಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್‌ ಸಚಿವೆ ಶಶಿಕಲಾ ಅ. ಜೊಲ್ಲೆ ತಿಳಿಸಿದರು.
Vijaya Karnataka Web Shashikala Jolle


ತಾಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ದೇವಾಲಯಗಳು ಬಂದ್‌ ಆಗಿರುವುದರಿಂದ ಇತ್ತೀಚೆಗೆ ದೇವಾಲಯಕ್ಕೆ ಬರುತ್ತಿದ್ದ ಆದಾಯದಲ್ಲಿ ಬಹಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ, ಕೋವಿಡ್‌ ಸೋಂಕಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆ ಆಗಿರುವ ಜಿಲ್ಲೆಗಳ ದೇವಾಲಯಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಚಿಂತನೆ ಮಾಡಲಾಗಿದೆ. ಈ ಕುರಿತು ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮುಜರಾಯಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ
ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಆರಂಭವಾಗಿದ್ದ ಸಪ್ತ ಪದಿ ಕಾರ್ಯಕ್ರಮವನ್ನು ಕೋವಿಡ್‌ ಸೋಂಕು ಹೆಚ್ಚಾದ ಹಿನ್ನೆಲೆ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ರಾಜ್ಯದಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಪ್ತ ಪದಿ ಕಾರ್ಯಕ್ರಮ ಪುನರಾರಂಭಿಸಲಾಗುವುದು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ