ಆ್ಯಪ್ನಗರ

ಬಡ್ತಿ ಮೀಸಲು: ಅನುಷ್ಠಾನ ವರದಿಗೆ ಸಿಎಸ್‌ ಸೂಚನೆ

ಪರಿಶಿಷ್ಟರ ಬಡ್ತಿ ಮೀಸಲು ರದ್ದುಪಡಿಸಿ ಸುಪ್ರೀಂಕೋರ್ಟ್‌ ಬಿ.ಕೆ.ಪವಿತ್ರ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಅನುಷ್ಠಾನ ವರದಿ ನೀಡಲು ಇಲಾಖಾ ಮುಖ್ಯಸ್ಥರುಗಳಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ತುರ್ತು ಸೂಚನೆ ನೀಡಿದ್ದಾರೆ.

Vijaya Karnataka Web 28 Apr 2018, 8:40 am
ಬೆಂಗಳೂರು: ಪರಿಶಿಷ್ಟರ ಬಡ್ತಿ ಮೀಸಲು ರದ್ದುಪಡಿಸಿ ಸುಪ್ರೀಂಕೋರ್ಟ್‌ ಬಿ.ಕೆ.ಪವಿತ್ರ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಅನುಷ್ಠಾನ ವರದಿ ನೀಡಲು ಇಲಾಖಾ ಮುಖ್ಯಸ್ಥರುಗಳಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ತುರ್ತು ಸೂಚನೆ ನೀಡಿದ್ದಾರೆ.
Vijaya Karnataka Web reservetion


ಪರಿಷ್ಕೃತ ಜೇಷ್ಠತಾ ಪಟ್ಟಿಆಧರಿಸಿ ಇಲಾಖಾವಾರು ಹೊರಡಿಸಿರುವ ಹಿಂಬಡ್ತಿ ಹಾಗೂ ಮುಂಬಡ್ತಿ ಆದೇಶಗಳ ಪ್ರತಿಗಳನ್ನು ತಮ್ಮ ಕಚೇರಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಚೇರಿಗೆ ತಕ್ಷಣ ತಲುಪಿಸುವಂತೆ ಆದೇಶಿಸಿದ್ದಾರೆ.

ಪರಿಷ್ಕೃತ ಜೇಷ್ಠತಾ ಪಟ್ಟಿ ಆಧರಿಸಿ ಮುಂಬಡ್ತಿ, ಹಿಂಬಡ್ತಿ ಮಾಡಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಮತ್ತು ಈ ಸಂಬಂಧದ ಪ್ರಕರಣಗಳಲ್ಲಿ ಹೈಕೋರ್ಟ್‌ ಅಥವಾ ಕೆಎಟಿ ತಡೆಯಾಜ್ಞೆ ನೀಡಬಾರದು ಎಂದು ಸುಪ್ರೀಂಕೋರ್ಟ್‌ ಏ.25ರಂದು ಸ್ಪಷ್ಟ ನಿರ್ದೇಶನ ನೀಡಿರುವುದನ್ನು ಮುಖ್ಯ ಕಾರ್ಯದರ್ಶಿಗಳು ತಮ್ಮ ಸೂಚನೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ