ಆ್ಯಪ್ನಗರ

ಕೊರೊನಾ ಎಫೆಕ್ಟ್‌: ಕೊಳಚೆ ಪ್ರದೇಶದ ನಿವಾಸಿಗಳು, ಕೂಲಿ ಕಾರ್ಮಿಕರಿಗೆ ಸಿಗಲಿದೆ ಉಚಿತ ಹಾಲು

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೊಳಚೆ ಪ್ರದೇಶದಲ್ಲಿ ವಾಸಮಾಡುತ್ತಿರುವ ನಿವಾಸಿಗಳು ಹಾಗೂ ಬಡ ಕೂಲಿ ಕಾರ್ಮಿಕರಿಗೆ ಉಚಿತವಾಗಿ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Vijaya Karnataka Web 2 Apr 2020, 5:56 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಆಯಾ ಜಿಲ್ಲೆಗಳ ಕೊಳಚೆ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ಜನರು ಹಾಗೂ ಕೂಲಿ ಕಾರ್ಮಿಕರಿಗೆ ಉಚಿತವಾಗಿ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
Vijaya Karnataka Web cm bsy


ಗುರುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೊರೊನಾ ಕಾರಣದಿಂದಾಗಿ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಹಾಲು ಪೂರೈಕೆಗೆ ಸಮಸ್ಯೆ ಉಂಟಾಗಿದ್ದು ಪ್ರತಿ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಹಾಲು ಸಂಗ್ರಹವಾಗುತ್ತಿದೆ.

ದೇಶಾದ್ಯಂತ 50 ಡಾಕ್ಟರ್ಸ್‌, ನರ್ಸ್‌ಗಳಿಗೂ ತಟ್ಟಿದ ಕೊರೊನಾ ಸೋಂಕು!

ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರು ಹಾಲನ್ನು ಉಚಿತವಾಗಿ ಕೊಳಚೆ ಪ್ರದೇಶನ ನಿವಾಸಿಗಳು ಹಾಗೂ ಬಡ ಕೂಲಿ ಕಾರ್ಮಿಕರಿಗೆ ವಿತರಣೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟು 14 ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಪ್ರತಿದಿನ 8.84 ಲಕ್ಷ ಲೀಟರ್‌ಗಳಷ್ಟು ಹಾಲು ಹೆಚ್ಚುವರಿಯಾಗಿ ಸಂಗ್ರಹವಾಗುತ್ತದೆ. ಈ ಹಾಲನ್ನು ಆಯಾ ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಕೊಳಚೆ ಪ್ರದೇಶದ ನಿವಾಸಿಗಳಿಗೆ ಪ್ರತಿದಿನ ಒಂದು ಲೀಟರ್‌ ಉಚಿತವಾಗಿ ನೀಡುವಂತೆ ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ