ಆ್ಯಪ್ನಗರ

ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ

ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳ ವಿಲೇವಾರಿ ಉದ್ದೇಶದಿಂದ 12 ರಿಂದ 18ರವರೆಗೆ ಇಲಾಖೆಯಲ್ಲಿ 'ಕಡತ ವಿಲೇವಾರಿ' ...

Vijaya Karnataka 10 Nov 2018, 5:00 am
ಬೆಂಗಳೂರು: ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳ ವಿಲೇವಾರಿ ಉದ್ದೇಶದಿಂದ 12 ರಿಂದ 18ರವರೆಗೆ ಇಲಾಖೆಯಲ್ಲಿ 'ಕಡತ ವಿಲೇವಾರಿ' ಸಪ್ತಾಹ ಆಚರಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದ್ದಾರೆ.
Vijaya Karnataka Web file


''ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ,'' ಎಂದು ಸಚಿವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

''ಈ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ಸಮಸ್ಯಾತ್ಮಕ ಕಡತಗಳನ್ನು ಕೂಡ ವಿಲೇವಾರಿ ಮಾಡಲಾಗುವುದು. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬ ಬಗ್ಗೆ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಲು ಸೂಚಿಸಲಾಗಿದೆ. ನ.18ರಂದು ಸಂಬಂಧಿಸಿದ ಎಲ್ಲ ಅಧಿಕಾರಿಗಳೂ ಸಪ್ತಾಹವು ಆರಂಭವಾದ ದಿನವಾದ ನ.12ರಂದು ಬಾಕಿ ಇದ್ದ ಕಡತಗಳೆಷ್ಟು, ಸಪ್ತಾಹದ ಅವಧಿಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಿರುವ ಕಡತಗಳೆಷ್ಟು ಮತ್ತು ಇನ್ನೂ ಬಾಕಿ ಇರುವ ಕಡತಗಳೆಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ಘ್ಕಿsಟ್ಚಟಟಟ್ಟdಧ್ಟಿvಛಿಃka್ಟ್ಞaಠಿaka.ಜಟv.ಜ್ಞಿಗೆಕಡ್ಡಾಯವಾಗಿ ಕಳುಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ