ಆ್ಯಪ್ನಗರ

ಕೋವಿಡ್‌ ವಾರಿಯರ್ಸ್‌ಗೆ ರಿಸ್ಕ್‌ ಭತ್ಯೆ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌!

ಸುಮಾರು 120 ದಿನಗಳಿಂದ ಆರೋಗ್ಯ ಯೋಧರಾಗಿರುವವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿದ್ದಾರೆ. ಅವರುಗಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿದ್ದು, ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಹೆಚ್ಚುವರಿ ಭತ್ಯೆ ಅಲ್ಪ ಪರಿಹಾರವಾಗಲಿದೆ ಎಂದು ಸುಧಾಕರ್‌ ತಿಳಿಸಿದ್ದಾರೆ.

Vijaya Karnataka 7 Jul 2020, 12:19 am

ಬೆಂಗಳೂರು: 'ಡಿ' ಗ್ರೂಪ್‌ ನೌಕರರಿಗೆ ವೇತನ ದುಪ್ಪಟ್ಟು, ಆರೋಗ್ಯ ಯೋಧರಿಗೆ 'ರಿಸ್ಕ್‌' ಭತ್ಯೆ ನೀಡುವುದಕ್ಕೆ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಪ್ರಕಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.
Vijaya Karnataka Web K Sudhakar


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, "ಸುಮಾರು 120 ದಿನಗಳಿಂದ ಆರೋಗ್ಯ ಯೋಧರಾಗಿರುವವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿದ್ದಾರೆ. ಅವರುಗಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿದ್ದು, ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಹೆಚ್ಚುವರಿ ಭತ್ಯೆ ಅಲ್ಪ ಪರಿಹಾರವಾಗಲಿದೆ," ಎಂದರು.

''ಕೋವಿಡ್‌ ನಿಯಂತ್ರಿಸಲು ಟೆಸ್ಟಿಂಗ್‌ ಹೆಚ್ಚಿಸುವ ಗುರಿ ಹೊಂದಲಾಗಿದ್ದು 24 ಗಂಟೆಗಳಲ್ಲಿ15 ಸಾವಿರಕ್ಕೂ ಅಧಿಕ ಪರೀಕ್ಷೆ ನಡೆಸಲಾಗಿದೆ," ಎಂದರು.
ಕೊರೊನಾ ಎಫೆಕ್ಟ್: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಯುವಕರ ನಡೆ ‘ದುಷ್ಕೃತ್ಯ’ ಎಂದ ಸುಧಾಕರ್!

ಗ್ರೇಸ್‌ ಮಾರ್ಕ್ಸ್‌


''ಬೆಂಗಳೂರಿನಲ್ಲಿಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ಸುಮಾರು 2 ಸಾವಿರ ವೈದ್ಯ ಮತ್ತು ನರ್ಸಿಂಗ್‌ ವಿದ್ಯಾರ್ಥಿಗಳ ನೆರವನ್ನು ಕೋವಿಡ್‌ ಕೇರ್‌ಸೆಂಟರ್‌ಗಳಲ್ಲಿ ಬಳಸಲಾಗುವುದು. ಈ ಸೇವೆಯಲ್ಲಿ ತೊಡಗುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ ನೀಟ್‌ ಪರೀಕ್ಷೆಯಲ್ಲಿ 5 ವಿಶೇಷಾಂಕಗಳನ್ನು ನೀಡುವ ಕುರಿತಂತೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು," ಎಂದು ಹೇಳಿದರು.

''ಬೂತ್‌ ಮಟ್ಟದ ಕಾರ್ಯಪಡೆ ರಚನೆ ಸಂಬಂಧ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಇದು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ