ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶನಿವಾರ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಪ್ರವಾಹ ಸಂತ್ರಸ್ತ ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯಲ್ಲಿ ಸಾವಿಗೀಡಾದವರಿಗೆ ಸಂತಾಪ ವ್ಯಕ್ತಪಡಿಸಲಾಯಿತು. ಇದೇ ವೇಳೆ ದೇವಳದ ನಿಧಿಯಿಂದ ಕೇರಳಕ್ಕೆ ರೂ.1 ಕೋಟಿ ಹಾಗೂ ಕೊಡಗು ಜಿಲ್ಲೆಗೆ ರೂ.25 ಲಕ್ಷ ರೂ. ಬಿಡುಗಡೆಗೆ ಮಂಜೂರಾತಿ ಕೋರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳಲು ತೀರ್ಮಾನಿಸಲಾಯಿತು.
ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯ ಪ್ರಾಕೃತಿಕ ವಿಕೋಪ ಶಮನಕ್ಕಾಗಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಗೆ ಶನಿವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯ ಪ್ರಾಕೃತಿಕ ವಿಕೋಪ ಶಮನಕ್ಕಾಗಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಗೆ ಶನಿವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.