ಆ್ಯಪ್ನಗರ

ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್: ಎಸ್‌ಡಿಪಿಐ ನಿಷೇಧಕ್ಕೆ ಜಗದೀಶ್ ಶೆಟ್ಟರ್ ಒತ್ತಾಯ

ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿರುವ ಸ್ಫೋಟಕ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗಗೊಂಡಿದ್ದು ಎಸ್‌ಡಿಪಿಐಯನ್ನು ನಿಷೇಧಗೊಳಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್‌ ಆಗ್ರಹಿಸಿದ್ದಾರೆ.

Vijaya Karnataka Web 17 Jan 2020, 1:13 pm
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಸಂಚು ರೂಪಿಸಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು ಎಸ್‌ಡಿಪಿಐಯನ್ನು ನಿಷೇಧ ಮಾಡುವಂತೆ ಸಚಿವ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
Vijaya Karnataka Web sdpi should be ban says bjp minister jagadish shettar
ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್: ಎಸ್‌ಡಿಪಿಐ ನಿಷೇಧಕ್ಕೆ ಜಗದೀಶ್ ಶೆಟ್ಟರ್ ಒತ್ತಾಯ


ಪೌರತ್ವ ತಿದ್ದುಪಡಿ ಕಾಯ್ದೆ(2019) ಪರವಾಗಿ ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಫಾರ್‌ ಸಿಎಎ ಕಾರ್ತಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ಆರೋಪದಡಿಯಲ್ಲಿ ಆರು ಮಂದಿ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆಯ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡಲು ಎಸ್‌ಡಿಪಿಐ ಕಾರ್ಯಕರ್ತರು ಸಂಚು ರೂಪಿಸಿದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ.

ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್..! ವರುಣ್ ಹಲ್ಲೆಕೋರರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ..!

ಈ ಕುರಿತು ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್ ಎಸ್‌ಡಿಪಿಐ ಯಾವತ್ತೂ ತಮ್ಮ ಮೇಲೆ ಬಂದ ಆರೋಪವನ್ನು ನಿರಾಕರಿಸುತ್ತಾ ಬಂದಿದೆ. ಆದರೆ ಇದೀಗ ಪೊಲೀಸ್ ತನಿಖೆಯಿಂದ ಎಸ್‌ಡಿಸಿಪಿ ಪಾತ್ರ ಸಾಬೀತಾಗಿದೆ. ಸಮಾಜಘಾತುಕ ಕೆಲಸಗಳಲ್ಲಿ ತೊಡಗಿಕೊಂಡಿರುವ ಇಂತಹ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಎಸ್‌ಡಿಪಿಐ ( ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಪಿಎಫ್‌ಐ ಸಂಘಟನೆಯ ರಾಜಕೀಯ ಘಟಕವಾಗಿದ್ದು ಸಂಘಪರಿವಾರದ ಕಾರ್ಯಕರ್ತರ ಕೊಲೆ ಆರೋಪ ಇವರ ಮೇಲಿದೆ. ಮಂಗಳೂರಿನಲ್ಲಿ ಶರತ್ ಮಡಿವಾಳ ಹತ್ಯೆ ಪ್ರಕರಣ ಹಾಗೂ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರ ಬಂಧನವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ