ಆ್ಯಪ್ನಗರ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಶುಲ್ಕ ಪಾವತಿ ಅವಧಿ ವಿಸ್ತರಣೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಜೂ.6ರ ವರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ವಿಸ್ತರಿಸಿದೆ.

Vijaya Karnataka Web 2 Jun 2018, 8:50 am
ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಜೂ.6ರ ವರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ವಿಸ್ತರಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಪರೀಕ್ಷಾ ಶುಲ್ಕ ಪಾವತಿ ದಿನಾಂಕ ವಿಸ್ತರಿಸಿದ್ದು, ಒಟ್ಟು 200 ರೂ. ದಂಡದೊಂದಿಗೆ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಬೇಕಿದೆ.
Vijaya Karnataka Web exam 2


ಪದವಿ ಪರೀಕ್ಷೆಗಳಿಗೆ ಪುನರಾವರ್ತಿತ (ರಿಪೀಟರ್‌) ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಇದೇ ಅಂತಿಮ ದಿನಾಂಕವಾಗಿರುತ್ತದೆ. ಆದ್ದರಿಂದ ಅಂತಿಮ ದಿನಾಂಕದ ನಂತರ ಕಾಲೇಜಿನ ಪ್ರಾಂಶುಪಾಲರು ಯಾವುದೇ ಕಾರಣಕ್ಕೂ ಪುನರಾವರ್ತಿತ ಅಭ್ಯರ್ಥಿಗಳ ಅರ್ಜಿಗಳನ್ನು ಸ್ವೀಕರಿಸಕೂಡದು ಎಂದು ಸೂಚಿಸಿರುವ ಇಲಾಖೆ, ಮತ್ತೊಮ್ಮೆ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ