ಆ್ಯಪ್ನಗರ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ

ರಾಜ್ಯಾದ್ಯಂತ ಜೂ...

Vijaya Karnataka 11 Jun 2019, 5:00 am
ಬೆಂಗಳೂರು: ರಾಜ್ಯಾದ್ಯಂತ ಜೂ.11ರ ಮಂಗಳವಾರದಿಂದ 20ರ ಗುರುವಾರದವರೆಗೆ ಒಟ್ಟು 302 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
Vijaya Karnataka Web second puc
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ


ಈ ಬಾರಿ ಒಟ್ಟು 1,35,230 ಬಾಲಕರು ಹಾಗೂ 94,379 ಬಾಲಕಿಯರು ಸೇರಿದಂತೆ ಒಟ್ಟು 2,29,609 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ 82,318, ವಾಣಿಜ್ಯ ವಿಭಾಗದಲ್ಲಿ 76,952 ಹಾಗೂ ವಿಜ್ಞಾನ ವಿಭಾಗದಲ್ಲಿ 70,339 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜತೆಗೆ, ಒಟ್ಟು 1,17,119 ಮಂದಿ ಕನ್ನಡ ಮಾಧ್ಯಮ ಮತ್ತು 1,12,490 ಮಂದಿ ಇಂಗ್ಲಿಷ್‌ ಮಾದ್ಯಮದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಧ್ಯಾಹ್ನ 2.30ರಿಂದ 5.45ರ ವರೆಗೆ ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಒಟ್ಟು 37 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಪರೀಕ್ಷಾ ಕಾರ್ಯಕ್ಕಾಗಿ ತಲಾ 302 ಮಂದಿ ಮುಖ್ಯ ಅಧೀಕ್ಷಕರು ಹಾಗೂ ಸಹ ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರರು ಮೊಬೈಲ್‌ ಫೋನ್‌, ಇ-ಕ್ಯಾಮೆರಾ, ಲ್ಯಾಪ್‌ಟಾಪ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಅಕ್ರಮಗಳನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ಸುಮಾರು 200 ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಸುತ್ತಮುತ್ತಲಿರುವ ಜೆರಾಕ್ಸ್‌ ಅಂಗಡಿಗಳನ್ನು ಸಹ ಮುಚ್ಚಲು ತೀರ್ಮಾನಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ