ಆ್ಯಪ್ನಗರ

ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ: ಸರಕಾರ ಸ್ಪಷ್ಟ ಉತ್ತರ ನೀಡದ್ದಕ್ಕೆ ಹೈಕೋರ್ಟ್‌ ಬೇಸರ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆರ್‌ಟಿಇ ಕಾಯಿದೆ ವ್ಯಾಪ್ತಿಗೊಳಪಡುವ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ನೀಡುವ ಕುರಿತು ಸರಕಾರ ಸ್ಪಷ್ಟ ಉತ್ತರ ನೀಡದ್ದಕ್ಕೆ ಹೈಕೋರ್ಟ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿತು.

Vijaya Karnataka 9 Aug 2019, 5:00 am
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆರ್‌ಟಿಇ ಕಾಯಿದೆ ವ್ಯಾಪ್ತಿಗೊಳಪಡುವ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ನೀಡುವ ಕುರಿತು ಸರಕಾರ ಸ್ಪಷ್ಟ ಉತ್ತರ ನೀಡದ್ದಕ್ಕೆ ಹೈಕೋರ್ಟ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿತು.
Vijaya Karnataka Web second uniform dress delay for students court angry
ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ: ಸರಕಾರ ಸ್ಪಷ್ಟ ಉತ್ತರ ನೀಡದ್ದಕ್ಕೆ ಹೈಕೋರ್ಟ್‌ ಬೇಸರ


ಕೊಪ್ಪಳ ಜಿಲ್ಲೆ ಕಿನ್ನಾಳ ಗ್ರಾಮದ ದೇವಪ್ಪ ಬಸಪ್ಪ ಹರಿಜನ ಅವರ ಪುತ್ರ ಮಾಸ್ಟರ್‌ ಮಂಜುನಾಥ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪಿ.ಎಂ. ನವಾಜ್‌ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಆಗ ಸರಕಾರಿ ವಕೀಲರು, ಎರಡನೇ ಜೊತೆ ಸಮವಸ್ತ್ರ ವಿತರಣೆ ಬಗ್ಗೆ ಮಾಹಿತಿ ನೀಡಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದರು.

ಅದಕ್ಕೆ ನ್ಯಾಯಪೀಠ, ''ಕಳೆದ ವಿಚಾರಣೆ ವೇಳೆಯೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಜ್ಯ ಸರಕಾರ, ಕೇಂದ್ರದ ಮೇಲೆ ಕೇಂದ್ರ ರಾಜ್ಯದ ಮೇಲೆ ಹೇಳುವುದು ಸರಿಯಲ್ಲ, ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡು ಮುಂದಿನ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಬೇಕು,'' ಎಂದು ಹೇಳಿತು.

ಇದು ಗಂಭೀರ ಸರಕಾರ ತೀರ್ಮಾನ ಕೈಗೊಳ್ಳದಿದ್ದರೆ ನ್ಯಾಯಾಲಯವೇ ಆದೇಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಆ.26ಕ್ಕೆ ಮುಂದೂಡಿತು.

2019-20ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದ ಮಕ್ಕಳು ಸೇರಿದಂತೆ ಆರ್‌ಟಿಇಯಡಿ ಪ್ರವೇಶ ಪಡೆದುಕೊಂಡ ಮಕ್ಕಳಿಗೆ ಒಂದು ಜೊತೆ ಸಿದ್ಧಪಡಿಸಿದ ಸಮವಸ್ತ್ರ ಮಾತ್ರ ವಿತರಿಸಲಾಗಿದೆ. ಎರಡನೇ ವಿತರಿಸಲಾಗಿಲ್ಲ.ಇದರಿಂದ ಬಡ ಮಕ್ಕಳು ಹಾಗೂ ಅವರ ಪೋಷಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ.ಅಲ್ಲದೇ ಅನೇಕ ಶಾಲೆಗಳಲ್ಲಿ ಇನ್ನೂ ಸಹ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ಸಹ ವಿತರಿಸಿಲ್ಲ. ಈ ನಿಟ್ಟಿನಲ್ಲಿ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ