ಆ್ಯಪ್ನಗರ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‌.ಕೆ ಪಾಟೀಲ್ ನೇಮಕ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉತ್ತರ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಚ್‌.ಕೆ ಪಾಟೀಲ್‌ ನೇಮಕಗೊಂಡಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ನಿರ್ವಹಿಸುತ್ತಿದ್ದ ಹೊಣೆಯನ್ನು ಇದೀಗ ಪಾಟೀಲರಿಗೆ ವಹಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

Vijaya Karnataka Web 22 Dec 2018, 3:57 pm

ಹೈಲೈಟ್ಸ್‌:

  • ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‌.ಕೆ ಪಾಟೀಲ್‌ ನೇಮಕ
  • ತಕ್ಷಣವೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ನೇಮಕ.
  • ಈ ವರೆಗೆ ಸಚಿವ ಡಿಕೆಶಿ ಪ್ರಚಾರ ಸಮಿತಿ ಹೊಣೆ ಹೊತ್ತಿದ್ದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web HK Patil
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ನಾಯಕ, ಮಾಜಿ ಸಚಿವ ಎಚ್‌.ಕೆ ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ.
ಎಐಸಿಸಿ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಈ ಪ್ರಕಟಣೆಗೆ ಸಹಿ ಮಾಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‌.ಕೆ ಪಾಟೀಲ್‌ ನೇಮಿಸಿ ಎಐಸಿಸಿ ಪ್ರಕಟಣೆ


ಸಚಿವ ಡಿ.ಕೆ. ಶಿವಕುಮಾರ್‌ ಅವರು ಈ ವರೆಗೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರ ಹೊಣೆಯಿಂದ ಮುಕ್ತಗೊಳಿಸಲಾಗಿದ್ದು, ಆ ಹೊಣೆಯನ್ನು ಎಚ್‌.ಕೆ ಪಾಟೀಲ್ ಅವರಿಗೆ ವಹಿಸಲಾಗಿದೆ.

ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ಸಚಿವ ಸಂಪುಟ ಇಂದು ಪುನಾರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಮಹತ್ವ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ