ಆ್ಯಪ್ನಗರ

ಶ್ರೀಗಳ ಹೇಳಿಕೆ ತಿರುಚಿದ ಎಂ.ಬಿ. ಪಾಟೀಲರಿಗೆ ನಾಚಿಕೆಯಾಗಬೇಕು : ಶೆಟ್ಟರ್‌

'ಸಿದ್ಧಗಂಗಾ ಶ್ರೀಗಳ ಹೇಳಿಕೆ ತಿರುಚಿದ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರಿಗೆ ನಾಚಿಕೆ ಆಗಬೇಕು' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 15 Sep 2017, 8:49 am

ಬಾಗಲಕೋಟ: 'ಸಿದ್ಧಗಂಗಾ ಶ್ರೀಗಳ ಹೇಳಿಕೆ ತಿರುಚಿದ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರಿಗೆ ನಾಚಿಕೆ ಆಗಬೇಕು' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 'ಇಷ್ಟು ದಿನ ಸುಮ್ಮನಾಗಿದ್ದ ಪಾಟೀಲರು ಏಕಾಏಕಿ ಲಿಂಗಾಯತ ಧರ್ಮದ ಹೋರಾಟಕ್ಕಾಗಿ ನಿಂತಿದ್ದಾರೆ. ಶ್ರೀಗಳ ಬಗ್ಗೆ ಅವರು ನೀಡಿದ ಹೇಳಿಕೆಯಿಂದ ನಿಜ ಬಣ್ಣ ಬಯಲಾಗಿದೆ. ಸ್ವಾಮೀಜಿ ಸುಳ್ಳು ಹೇಳುತ್ತಿದ್ದಾರೆ ಎಂದು ಪಾಟೀಲರು ಬಿಂಬಿಸಿರುವುದು ಅವಮಾನಕರವಾಗಿದೆ. ಕಾಂಗ್ರೆಸ್‌ ಸರಕಾರ ಸೃಷ್ಟಿಸಿದ ವೀರಶೈವ ಲಿಂಗಾಯತ ವಿವಾದ ಆ ಪಕ್ಷಕ್ಕೆ ಮುಳುವಾಗಿದೆ. ಜಲಸಂಪನ್ಮೂಲ ಖಾತೆ ಬಿಟ್ಟು ಉಳಿದೆಲ್ಲ ಕೆಲಸ ಮಾಡುವ ಪಾಟೀಲರು ಸಮಾಜ ಒಡೆಯುತ್ತಿದ್ದಾರೆ' ಎಂದು ಆರೋಪಿಸಿದರು.

'ಏಕಾಏಕಿ ಕಾಂಗ್ರೆಸ್‌ ಸಚಿವರಿಗೆ ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಕಳಕಳಿ ಬಂದಿದೆ. ನಾಲ್ಕು ವರ್ಷಗಳ ಕಾಲ ಸುಮ್ಮನಿದ್ದ ಸಚಿವರು ಒಂದೊಂದು ಬಗೆಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಈವರೆಗೆ ಇವರೆಲ್ಲ ಎಲ್ಲಿ ಮಲಗಿಕೊಂಡಿದ್ದರು,'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ