ಆ್ಯಪ್ನಗರ

ಕುರಿಗಾಹಿಗೆ ಕೊರೊನಾ ಸೋಂಕು: 40 ಕುರಿಗಳಿಗೆ ಕ್ವಾರಂಟೈನ್

ಕುರಿಗಾಹಿಗೆ ಕೋವಿಡ್‌ -19 ಸೋಂಕು ಹರಡಿರುವ ಹಿನ್ನೆಲೆ, ಆತ ಕಾಯುತ್ತಿದ್ದ 40 ಕುರಿಗಳನ್ನು ಪ್ರತ್ಯೇಕವಾಗಿರಿಸಿ ಅವುಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Karnataka Web 30 Jun 2020, 7:44 am
ತುಮಕೂರು: ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿಆತ ಮೇಯಿಸುತ್ತಿದ್ದ ಕುರಿಗಳಿಗೂ ಕೊರೊನಾ ಪರೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ


ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್‌ ಸಂಬಂಧಿಸಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,''ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಹಾಗಾಗಿ ಆತನ 40 ಕುರಿಗಳನ್ನು ಪ್ರತ್ಯೇಕವಾಗಿರಿಸಿ ಅವುಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸಬೇಕು,''ಎಂದು ನಿರ್ದೇಶಿಸಿದರು.''ಇಲ್ಲಿಯವರೆಗೂ ಕೊರೊನಾ ಕುರಿಯ ಮೂಲಕ ಹರಡಿದೆ ಎಂಬುದಕ್ಕೆ ಸಾಕ್ಷ್ಯವಿಲ್ಲ. ಆದರೂ ಕೊರೊನಾ ವಿಭಿನ್ನ ಸ್ವರೂಪದಲ್ಲಿರುವುದರಿಂದ ಕುರಿಗಳ ದ್ರವವನ್ನು ತೆಗೆದು ಪರೀಕ್ಷಿಸಲು ಸೂಚಿಸಲಾಗಿದೆ,'' ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕಂಟೈನ್ಮೆಂಟ್‌ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ತಪಾಸಣೆ ನಡೆಸಬೇಕು. ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು,'' ಎಂದು ಮಾಧುಸ್ವಾಮಿ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ