ಆ್ಯಪ್ನಗರ

ರಾಮಲಿಂಗಾರೆಡ್ಡಿ ನಿರ್ಧಾರದಿಂದ ಆಘಾತ: ಎಂಟಿಬಿ ನಾಗರಾಜ್

ರಾಜೀನಾಮೆ ವಾಪಸ್ ಪಡೆದಿರುವ ರಾಮಲಿಂಗಾರೆಡ್ಡಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ಬಂಡಾಯ ಶಾಸಕ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 19 Jul 2019, 12:41 pm
ಬೆಂಗಳೂರು: ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ನಿರ್ಧಾರಕ್ಕೆ ಹೊಸಕೋಟೆ ವಿಧಾನಸಭೆಯ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಅವರು, ನಿನ್ನೆ (ಗುರುವಾರ) ಪತ್ರಿಕಾಗೋಷ್ಠಿಯಲ್ಲಿ ರಾಮಲಿಂಗಾರೆಡ್ಡಿ ಅವರು ನೀಡಿರುವ ಹೇಳಿಕೆ ಮತ್ತು ಅವರ ನಡೆಯಿಂದ ಆಘಾತವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಸಭೆ ನಡೆದಿತ್ತು. ಪಕ್ಷದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ನಾವೆಲ್ಲ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇವು. ಆದರೆ, ಇದೀಗ ರಾಮಲಿಂಗಾರೆಡ್ಡಿ ಅವರು ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದು ಆಘಾತವನ್ನುಂಟು ಮಾಡಿದೆ. ಆದರೆ, ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ