ಆ್ಯಪ್ನಗರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಗೊಂದಲ: ರಾಹುಲ್ ಭೇಟಿ ಮಾಡಲಿರೋ ಸಿದ್ದು

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ವಿಚಾರವಾಗಿ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಭೇಟಿ ಮಾಡಿರುವ ಸಿದ್ದರಾಮಯ್ಯ ಬುಧವಾರದಂದು ರಾಹುಲ್ ಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Vijaya Karnataka Web 15 Jan 2020, 11:28 am
ಹೊಸದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರವಾಗಿ ಗೊಂದಲ ಮುಂದುವರಿದಿದ್ದು ದೆಹಲಿಯಲ್ಲಿ ಬೀಡುಬಿಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಸೋನಿಯಾಗಾಂಧಿ ಜೊತೆ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪಟ್ಟ ಎಂಬಿ ಪಾಟೀಲ್‌ ಅವರಿಗೆ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
Vijaya Karnataka Web siddaramaiah at delhi meets rahul gandhi to discuss on kpcc president post
ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಗೊಂದಲ: ರಾಹುಲ್ ಭೇಟಿ ಮಾಡಲಿರೋ ಸಿದ್ದು


ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದು ಅಧ್ಯಕ್ಷ ಆಯ್ಕೆ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ನಡುವೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸುವಂತೆ ಸೋನಿಯಾಗಾಂಧಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಮಂಗಳವಾರ ಸೋನಿಯಾ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದರು.

ಎಂ.ಬಿ ಪಾಟೀಲ್‌ಗೆ ಕೆಪಿಸಿಸಿ ಪಟ್ಟ ನೀಡಿ; ಸೋನಿಯಾ ಮುಂದೆ ಸಿದ್ದು ಡಿಮ್ಯಾಂಡ್ ?

ಪಕ್ಷ ಸಂಘಟನೆ ಹಾಗೂ ಹೊಂದಾಣಿಕೆ ಮಾಡಿಕೊಂಡು ಹೋಗುವ ನಿಟ್ಟಿನಲ್ಲಿ ಡಿ. ಕೆ ಶಿವಕುಮಾರ್ ಬದಲಾಗಿ ಎಂಬಿ ಪಾಟೀಲ್‌ ಆಯ್ಕೆ ಸೂಕ್ತವಾಗಿದೆ. ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣವಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗೆ ಕಾರಣವಾಗಬಹುದು. ಪಕ್ಷ ಸಂಘಟನೆಗೂ ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕ್ಲೀನ್ ಇಮೇಜ್ ಇದ್ದವರಿಗೆ ಕೆಪಿಸಿಸಿ ಸ್ಥಾನ ನೀಡುವುದು ಉತ್ತಮ ಎಂದಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯ ಕೇಳಿಸಿಕೊಂಡ ಸೋನಿಯಾಗಾಂಧಿ ಇತರ ಮುಖಂಡರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸುವಂತೆಯೂ ತಿಳಿಸಿದ್ದಾರೆ.

ಕೆಪಿಸಿಸಿ ಗಾದಿಗಾಗಿ ಫೈಟ್: ದೆಹಲಿಯಲ್ಲಿ ಸಿದ್ದು ಸಭೆ, ಬೆಂಗಳೂರಿನಲ್ಲೇ ಉಳಿದ ಡಿಕೆಶಿ

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲೇ ಉಳಿದುಕೊಂಡಿರುವ ಸಿದ್ದರಾಮಯ್ಯ ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸಿ ತಮ್ಮ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಪರಿಣಾಮ ಅಧ್ಯಕ್ಷ ಘೋಷಣೆ ದಿನಾಂಕ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೆಪಿಸಿಸಿ ಪಟ್ಟಕ್ಕೆ ಮುನಿಯಪ್ಪ ಲಾಬಿ


ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಲಾಬಿ ಮುಂದುವರಿದಿದ್ದು ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ಜೊತೆಗೆ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಕೂಡಾ ಲಾಬಿ ಆರಂಭಿಸಿದ್ದಾರೆ. ನಾನು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದಿರುವ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ಲಾಬಿ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ