ಆ್ಯಪ್ನಗರ

ಟಿಪ್ಪು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಈ ನಾಡಿಗೆ ಬಗೆವ ದ್ರೋಹ: ಸಿದ್ದರಾಮಯ್ಯ

"ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ."

Vijaya Karnataka Web 10 Nov 2018, 12:01 pm
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, "ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ.
Vijaya Karnataka Web siddaramaiah

ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ,ವೀರ ಸಿಂಧೂರ ಲಕ್ಷ್ಮಣ, ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ?" ಎಂದು ಪ್ರಶ್ನಿಸಿದ್ದಾರೆ.

"ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ,ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ, ಹಾಡುಗಳೇನಿಜವಾದ ಇತಿಹಾಸ." ಎಂದಿದ್ದಾರೆ.




"ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ."

"ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ."

"ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ." ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌ಗೆ ಸಾಕಷ್ಟು ಪ್ರತಿಕ್ರಿಯೆಗಳೂ ಬಂದಿದ್ದು ಒಬ್ಬರು ಈ ರೀತಿ ಕೇಳಿದ್ದಾರೆ, "ಸರ್ ನಿಮ್ಮ ಟಿಪ್ಪು ಅಪ್ರತಿಮ ವೀರನಾಗಿದ್ದರೆ ನೇರವಾಗಿ ಮದಕರಿನಾಯಕರ ಎದುರು ಹೋರಾಡಿ ಮದಕರಿ ನಾಯಕರನ್ನು ಸೋಲಿಸ ಬೇಕಿತ್ತು,ಏಕೆ ಸರ್ ಸೋಲಿಸಲಾಗದೆ ವಿಷ ಹಾಕಿ ಕೊಂದರು. ನಿಮಗೆ ಸರ್ವ ಧರ್ಮದ ಮೇಲೆ ಗೌರವವಿದ್ದಿದ್ದರೆ,ಒಳ್ಳೆಯ ಉದ್ದೇಶವಿದ್ದಿದ್ದರೆ "ಅಬ್ದುಲ್ ಕಲಾಂ " ಜಯಂತಿ ಆಚರಿಸ ಬೇಕಿತ್ತು. ಹೀಗೆ ಗೊಂದಲ ಜಯಂತಿಯ ಅವಶ್ಯಕತೆಯಿರಲಿಲ್ಲ ಸರ್".

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ