ಆ್ಯಪ್ನಗರ

ಆಂಗ್ಲ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ವಿರೋಧ: ಸಿದ್ದರಾಮಯ್ಯ

ಮಾತೃಭಾಷೆ ಯಲ್ಲಿ ಶಿಕ್ಷಣ ನೀಡುವಂತಾಗಲು ಸಂವಿಧಾನ ತಿದ್ದುಪಡಿ ಪಡಿ ಆಗಬೇಕಿದೆ. ಈ ಹಿಂದೆ ಪ್ರಧಾನಿಗೆ ಈ ಕುರಿತು ಪತ್ರ ಬರೆದಿದ್ದೆ. ಆದರೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

Vijaya Karnataka Web 22 May 2019, 6:26 pm
ಮೈಸೂರು: ಆಂಗ್ಲ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ರಾಜ್ಯ ಸರಕಾರದ ಪ್ರಸ್ತಾವಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತನಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಆಂಗ್ಲ ಮಾಧ್ಯಮ ದಲ್ಲಿ ಪ್ರಾಥಮಿಕ ಶಿಕ್ಷಣ ನೀಡಲು ನನ್ನ ವೈಯಕ್ತಿಕ ವಿರೋಧವಿದೆ. ಈ ವಿಷಯದ ಬಗ್ಗೆ ನಾನು ಮತ್ತೊಮ್ಮೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದರು.


ಮಾತೃಭಾಷೆ ಯಲ್ಲಿ ಶಿಕ್ಷಣ ನೀಡುವಂತಾಗಲು ಸಂವಿಧಾನ ತಿದ್ದುಪಡಿ ಪಡಿ ಆಗಬೇಕಿದೆ. ಈ ಹಿಂದೆ ಪ್ರಧಾನಿಗೆ ಈ ಕುರಿತು ಪತ್ರ ಬರೆದಿದ್ದೆ. ಆದರೆ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.



ನಮ್ಮ ಮಾತೃಭಾಷೆಯಲ್ಲಿ ಶಿಕ್ಷಣ ಇರಬೇಕು ಎಂಬುದು ನನ್ನ ಅನಿಸಿಕೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.


ಈ ಸಂಬಂಧ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ