ಆ್ಯಪ್ನಗರ

ಕನ್ನಡ ಸಾರ್ವಭೌಮ ಭಾಷೆಯಾಗಲಿ: ಇಂಗ್ಲಿಷ್‌ ಮಾಧ್ಯಮ ಆರಂಭಿಸುವ ಎಚ್‌ಡಿಕೆ ನಿರ್ಧಾರಕ್ಕೆ ಸಿದ್ದು ವಿರೋಧ

ಪ್ರತಿಯೊಂದು ನಡೆಯಲ್ಲೂ ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ಪರೋಕ್ಷವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನಡೆಯುತ್ತಲೇ ಇದೆ. ಈಗ ಇಂಗ್ಲಿಷ್‌ ಮಾಧ್ಯಮ ಶಾಲೆ ವಿಷಯ ಕೂಡ ಇಬ್ಬರ ನಡುವೆ ವಾದ-ಪ್ರತಿವಾದಕ್ಕೆ ವೇದಿಕೆ ಮಾಡಿಕೊಟ್ಟಿದೆ.

Vijaya Karnataka Web 27 Dec 2018, 4:54 pm
ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಶೀತಲ ಸಮರ, ಮುಸುಕಿನ ಗುದ್ದಾಟ ಮುಂದುವರಿಯುತ್ತಲೇ ಇವೆ.
Vijaya Karnataka Web ಸಿದ್ದರಾಮಯ್ಯ, ಕುಮಾರಸ್ವಾಮಿ
ಸಿದ್ದರಾಮಯ್ಯ, ಕುಮಾರಸ್ವಾಮಿ


ಪ್ರತಿಯೊಂದು ನಡೆಯಲ್ಲೂ ಇಬ್ಬರೂ ಪರಸ್ಪರ ಪರೋಕ್ಷವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನಡೆಯುತ್ತಲೇ ಇದೆ.

ಈಗ ಇಂಗ್ಲಿಷ್‌ ಮಾಧ್ಯಮ ಶಾಲೆ ವಿಷಯ ಕೂಡ ಇಬ್ಬರ ನಡುವೆ ವಾದ-ಪ್ರತಿವಾದಕ್ಕೆ ವೇದಿಕೆ ಮಾಡಿಕೊಟ್ಟಿದೆ.



ರಾಜ್ಯದಲ್ಲಿ 1000 ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

ಇದಕ್ಕೆ ಸಿದ್ದರಾಮಯ್ಯ ಟ್ವಿಟರ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರ ಈ ನಿರ್ಧಾರ ಕುರಿತು ಚರ್ಚೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು ಎಂದೂ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ