ಆ್ಯಪ್ನಗರ

ಜನರ ತೀರ್ಪಿಗೆ ಬದ್ಧ ಆದರೆ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿದೆ: ಸಿದ್ದರಾಮಯ್ಯ ಆರೋಪ

ಶಿರಾದಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಇತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕಾಗುತ್ತು. ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಮಾಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Vijaya Karnataka Web 10 Nov 2020, 4:02 pm
ಬಾಗಲಕೋಟೆ: ಶಿರಾದಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಇತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕಾಗುತ್ತು. ನಾವು ಜನರ ತೀರ್ಪನ್ನು ಒಪ್ಪಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Vijaya Karnataka Web siddaramaiah


ಉಪ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿರಾದಲ್ಲಿ ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆ ಇತ್ತು. ಆರ್. ಆರ್. ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತಿವಿ ಎಂದುಕೊಂಡಿದ್ದೆವು. ಇದೀಗ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ.

ಮುಂದಿನ ಸಿಎಂ ಅಭ್ಯರ್ಥಿ ಚರ್ಚೆಯಲ್ಲಿದ್ದ ಕಾಂಗ್ರೆಸ್‌ಗೆ ಬೈ ಎಲೆಕ್ಷನ್ ರಿಸಲ್ಟ್ ಶಾಕ್..!

ಸರಕಾರದಿಂದ ಅಧಿಕಾರ ದುರುಪಯೋಗ:
ನಿಷ್ಪಕ್ಷಪಾತ ಹಾಗೂ ಮುಕ್ತ ಚುನಾವಣೆ ನಡೆಸುವುದು ಸರಕಾರದ ಜವಾಬ್ದಾರಿ. ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಮಾಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಚುನಾವಣೆ ತೀರ್ಪನ್ನು ಒಪ್ಪಿಕೊಳ್ಳಲೇಬೇಕಿದೆ.ಹಾಗಾಗಿ ಒಪ್ಪಿಕೊಂಡಿದ್ದೇವೆ ಎಂದರು.

ಬೈ ಎಲೆಕ್ಷನ್‌ ರಿಸಲ್ಟ್ Live Updates; ಹ್ಯಾಟ್ರಿಕ್ ಗೆಲುವು ದಾಖಲಿಸಿದ ಮುನಿರತ್ನ; ಶಿರಾದಲ್ಲಿ ಖಾತೆ ತೆರೆದ ಕಮಲ..!

ಯಡಿಯೂರಪ್ಪ ಈಗಲೂ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ?
ಬೈ ಎಲೆಕ್ಷನ್ ಬಳಿಕ ಬಿ.ಎಸ್‌, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯುವ ಕುರಿತು ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು. ಈಗಲೂ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ