ಆ್ಯಪ್ನಗರ

‘ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನ್‌ ತಿಂತಿದ್ದೀರಾ?’ ; ಬಿಸಿ ಪಾಟೀಲ್‌ಗೆ ಸಿದ್ದರಾಮಯ್ಯ ಕ್ಲಾಸ್‌

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ನಿಮಗೆ ಒಂದು ಕ್ಷಣವೂ ಕೃಷಿಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.

Vijaya Karnataka Web 4 Dec 2020, 9:50 am
ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
Vijaya Karnataka Web Siddaramaiah.Bccl


ಬನ್ನೇರುಘಟ್ಟ ಉದ್ಯಾನವನದ ಬಳಿ ಬೈಕ್‌ ರೇಸ್ ತರಬೇತಿ‌; ವನ್ಯಜೀವಿಗಳ ಸಹಜ ಜೀವನಕ್ಕೂ ಅಡ್ಡಿ, ಆತಂಕ..!

ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಸಿ ಪಾಟೀಲ್‌ ನೀಡಿರುವ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲ್? ಎಂದು ಪ್ರಶ್ನಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ಅನುದಾನ ಒದಗಿಸಲು ಮೀನಾಮೇಷ; ಮುಚ್ಚುವ ಸ್ಥಿತಿಯಲ್ಲಿದೆ ಬಡವರ ಅಕ್ಷಯಪಾತ್ರೆ..!

ಸರಣಿ ಟ್ವೀಟ್‌ ಮೂಲಕ ಬಿಸಿ ಪಾಟೀಲ್‌ರನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಮಳೆ ಮತ್ತು ಪ್ರವಾಹದಿಂದ ಸರ್ವಸ್ವವನ್ನು ಕಳೆದುಕೊಂಡು ಬೀದಿಪಾಲಾಗಿರುವ ರೈತರಿಗೆ ಪರಿಹಾರ ಕೊಟ್ಟು ನೆರವಾಗುವ ಯೋಗ್ಯತೆ ನಿಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ. ಗಾಯದ ಮೇಲೆ ಬರ ಎಳೆದಂತೆ ಅದೇ ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನು ತಿನ್ತಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಬೆಳಗಾವಿ ಮೂಲದ ಯೋಧ ಆತ್ಮಹತ್ಯೆ ಶಂಕೆ..!

ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ನಿಮಗೆ ಒಂದು ಕ್ಷಣವೂ ಕೃಷಿಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ