ಆ್ಯಪ್ನಗರ

ಆರ್‌ಎಸ್‌ಎಸ್‌ನಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕೆ ಇದ್ದಾರೆ: ಸಿದ್ದರಾಮಯ್ಯ

ಬಿಜೆಪಿಯ ಒಬ್ಬ ನಾಯಕರು ಆರ್.ಎಸ್.ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್.ಎಸ್.ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ?

Vijaya Karnataka Web 30 May 2022, 7:26 pm
ಬೆಂಗಳೂರು: ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಇಂತಹದ್ದೊಂದು ಸರಳ ಪ್ರಶ್ನೆಗೆ ಆರ್.ಎಸ್.ಎಸ್ ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ‌ ಎಂದು ಹೇಳಿದ್ದಾರೆ.

ಆರೆಸ್ಸೆಸ್ ಮೂಲ ಕುರಿತ ಚರ್ಚೆ ಬೆನ್ನಲ್ಲೇ ದ್ರಾವಿಡ v/s ಆರ್ಯ ಫೈಟ್‌: ಕಾಂಗ್ರೆಸ್-ಬಿಜೆಪಿ ನಡುವೆ ಪಂಥ ಜಗಳ!

ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್.ಎಸ್.ಎಸ್, ಬಿಜೆಪಿಯ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. 97 ವರ್ಷಗಳ ಇತಿಹಾಸವಿರುವ ಆರ್.ಎಸ್.ಎಸ್ ನನ್ನದೊಂದು ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಬಿಜೆಪಿಯ ಒಬ್ಬ ನಾಯಕರು ಆರ್.ಎಸ್.ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್.ಎಸ್.ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ? ಎಂದು ಪ್ರಶ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.


ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳೇ, ಆರ್.ಎಸ್.ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ. ಆರ್.ಎಸ್.ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಜೀವಂತ ಉದಾಹರಣೆ ಎಂದು ಮಾಜಿ ಮುಖ್ಯಮಂತ್ರಿ ತಿವಿದಿದ್ದಾರೆ.

ಬೊಮ್ಮಾಯಿ ಕೂಡ ದ್ರಾವಿಡರೇ, ಬೇಗ ಘರ್‌ ವಾಪಸಿ ಆಗಿ ಬಿಡಿ: ಸಿದ್ದರಾಮಯ್ಯ

ಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ಧ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ