ಆ್ಯಪ್ನಗರ

ಸಿಎಂ ಯಡಿಯೂರಪ್ಪ ಸ್ಥಿತಿ ನೋಡಿದರೆ, ಅನುಕಂಪ ಮೂಡುವಂತಾಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಸಿಎಂ ಬಿ ಎಸ್ ಯಡಿಯೂರಪ್ಪ ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷ ನೋಡಿದರೆ, ಅನುಕಂಪ ಮೂಡುವಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Vijaya Karnataka Web 27 Aug 2019, 1:18 pm
ಬೆಂಗಳೂರು: 'ಮುಖ್ಯಮಂತ್ರಿ ಅವರ ರಾಜಕೀಯ ಸ್ಥಿತಿ ನೋಡಿದರೆ, ಅವರ ರಾಜಕೀಯ ಎದುರಾಳಿಯಾಗಿರುವ ನನ್ನಲ್ಲಿಯೂ ಅನುಕಂಪ ಮೂಡುತ್ತಿದೆ'- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲೆಳೆದ ಪರಿ ಇದು.
Vijaya Karnataka Web siddaramaiah


ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ ಮತ್ತು ಅಸಂತೋಷವನ್ನು ನೋಡುತ್ತಿದ್ದರೆ, ಅವರ ರಾಜಕೀಯ ಎದುರಾಳಿಯಾದ ನನ್ನಂತವನಲ್ಲಿಯೂ ಅವರ ಬಗ್ಗೆ ಅನುಕಂಪ ಮೂಡುವಂತಾಗಿದೆ' ಎಂದು ವ್ಯಂಗ್ಯವಾಡಿದ್ದಾರೆ.


ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲು 3 ದಿನ. ಸಂಪುಟ ರಚನೆಗೆ 26 ದಿನ. ಖಾತೆ ಹಂಚಿಕೆಗೆ 6 ದಿನ ತೆಗೆದುಕೊಂಡಿದ್ದಿರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.


ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ, ಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ