ಆ್ಯಪ್ನಗರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಮೈಶುಗರ್‌ ಸಂಸ್ಥೆಗೆ ಸರಕಾರವೇ ಒಂದಷ್ಟು ಬಂಡವಾಳ ನೀಡಿ ಆಧುನಿಕರಣಗೊಳಿಸಬೇಕು. ಕಬ್ಬು ಅರೆಯುವ ಸಾಮರ್ಥ್ಯವನ್ನು ಹೆಚ್ಚು ಮಾಡಿ ಕಾರ್ಖಾನೆಯ ನೌಕರರು ಮತ್ತು ಈ ಭಾಗದ ಕಬ್ಬು ಬೆಳೆಗಾರರನ್ನು ಸಂರಕ್ಷಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vijaya Karnataka 6 Jun 2020, 3:58 pm

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಬಾರದು ಎಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
Vijaya Karnataka Web siddaramaiah


ನಾಲ್ವಡಿ ಕೃಷ್ಣರಾಜ ಒಡೆಯರ್‌ ವಿಶೇಷ ಆಸಕ್ತಿಯಿಂದ 1933ರಲ್ಲಿ ಮೈಸೂರು ಸಕ್ಕರೆ ಕಾರ್ಖಾನೆ ಆರಂಭಗೊಂಡಿತು. ಮುಂದೆ ಇದನ್ನು ಮೈಶುಗರ್‌ ಸಕ್ಕರೆ ಕಾರ್ಖಾನೆ ಎಂದು ಕರೆಯಲಾಯಿತು. 14,046 ರೈತರು ಇದರ ಷೇರುದಾರರಾಗಿದ್ದಾರೆ. ಪ್ರತಿ ನಿತ್ಯ 5 ಟನ್ ಸಕ್ಕರೆ ಅರೆಯುವ ಸಾಮರ್ಥ್ಯ ಈ ಕಾರ್ಖಾನೆಗಿದ್ದು, ಈ ಹಿಂದೆ ವಾರ್ಷಿಕ 9 ಲಕ್ಷ ಮೆಟ್ರಿಕ್‌ ಟನ್‌ ಕಬ್ಬನ್ನು ಈ ಕಾರ್ಖಾನೆ ಅರೆಯುತ್ತಿತ್ತು. ರೈತರ ಬದುಕನ್ನು ಸುಧಾರಿಸಲು, ಮಂಡ್ಯದಂಥ ನಗರ ರೂಪುಗೊಳ್ಳಲು ಈ ಕಾರ್ಖಾನೆಯ ಪಾತ್ರ ಮಹತ್ವದ್ದು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡುವ ಸರಕಾರದ ತೀರ್ಮಾನ ದುರದೃಷ್ಟಕರ ಎಂದಿರುವ ಸಿದ್ದರಾಮಯ್ಯ, 2013 ರಿಂದ 2018-19ರವರೆಗೆ ಕಾರ್ಖಾನೆ ಪುನಶ್ಚೇತನಕ್ಕೆ 229.65 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ: ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ, ಬಿಎಸ್‌ವೈ ಭರವಸೆ


ಡಿಸ್ಟಿಲರಿ, ಗ್ಲೂಕೋಸ್‌, ಚಾಕ್ಲೇಟ್‌, ಎಥೆನಾಲ್‌ ಉತ್ಪಾದಿಸುವ ಸಾಮರ್ಥ್ಯ ಈ ಕಾರ್ಖಾನೆಗಿತ್ತು. 18ಕ್ಕೂ ಹೆಚ್ಚು ವರ್ಷ ಶೇ. 20 ರಿಂದ 30ರಷ್ಟು ಡಿವಿಡೆಂಡ್ ನೀಡದ ಸಂಸ್ಥೆ ಇದು. 14ಕ್ಕೂ ಹೆಚ್ಚು ಫಾರ್ಮ್‌ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿ ಸಂಸ್ಥೆ ಬಳಿಯಲ್ಲಿದೆ. ಇಂಥ ಸಂಸ್ಥೆಗೆ ಸರಕಾರವೇ ಒಂದಷ್ಟು ಬಂಡವಾಳ ನೀಡಿ ಆಧುನಿಕರಣಗೊಳಿಸಿ ಶಕ್ತಗೊಳಿಸಬೇಕು. ಕಬ್ಬು ಅರೆಯುವ ಸಾಮರ್ಥ್ಯವನ್ನು ಹೆಚ್ಚು ಮಾಡಿ ಕಾರ್ಖಾನೆಯ ನೌಕರರು ಮತ್ತು ಈ ಭಾಗದ ಕಬ್ಬು ಬೆಳೆಗಾರರನ್ನು ಸಂರಕ್ಷಿಸಬೇಕು. ಹಾಗೂ ಮಂಡ್ಯ ಜಿಲ್ಲೆಯ ಆರ್ಥಿಕತೆಯನ್ನು ಪುನಶ್ಚೇತನಗೊಳಸಿಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ