ಆ್ಯಪ್ನಗರ

ಸಿದ್ದರಾಮಯ್ಯ ಸಿಎಂ ಆದರಷ್ಟೇ ಸರಕಾರ ಉಳಿಯಲಿದೆ ಎಂದ ರಾಜಣ್ಣ

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಅಂದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಹಾಗಾದರೆ ಮಾತ್ರ ಸಮ್ಮಿಶ್ರ ಸರಕಾರ ಉಳಿಯಲಿದೆ...

Vijaya Karnataka 9 Jul 2019, 5:00 am
ತುಮಕೂರು: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಅಂದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಹಾಗಾದರೆ ಮಾತ್ರ ಸಮ್ಮಿಶ್ರ ಸರಕಾರ ಉಳಿಯಲಿದೆ. ಇಲ್ಲದಿದ್ದರೆ ಬಿ.ಎಸ್‌. ಯಡಿಯೂರಪ್ಪ ಅವರು ನಾಲ್ಕೈದು ದಿನಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಭವಿಷ್ಯ ನುಡಿದರು.
Vijaya Karnataka Web knrajanna


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಅತೃಪ್ತ ಶಾಸಕರ ಮನವೊಲಿಸಲು ಮುಂಬೈಗೆ ಹೊರಟಿದ್ದೇವೆ. ಶಾಸಕ ಮುನಿರತ್ನ ರಾಮಲಿಂಗಾರೆಡ್ಡಿ ಸೇರಿದಂತೆ ಹಲವರು ಇರಲಿದ್ದಾರೆ. ಎಲ್ಲರನ್ನೂ ವಾಪಸ್ಸು ಕರೆದುಕೊಂಡು ಬಂದು ಸರಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ,'' ಎಂದರು.

''ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವುದಾಗಿ ದೇವೇಗೌಡರು ಹೇಳಿದ್ದರು. ಆದರೆ, ಅವರು ಹೇಳಿದಂತೆ ಯಾವತ್ತೂ ನಡೆದುಕೊಂಡಿಲ್ಲ. ಇನ್ನೂ ನಾಲ್ಕೈದು ಶಾಸಕರು ರಾಜೀನಾಮೆ ಕೊಡಲಿದ್ದಾರೆ,'' ಎಂದು ಹೇಳಿದರು.

'' ಸರಕಾರದ ಮೇಲಿನ ಅಸಮಾಧಾನದಿಂದ ರಾಜೀನಾಮೆ ಕೊಟ್ಟಿದ್ದಾರೆ. ಖರ್ಗೆ ಅವರನ್ನು ಸಿಎಂ ಮಾಡೋದಾದರೂ ಸ್ವಾಗತ. ಮುಂಬೈಗೆ ಹೋಗಿ ಅತೃಪ್ತರನ್ನು ವಾಪಸ್ಸು ಕರೆದುಕೊಂಡು ಬಂದು ಜೀರೋ ಟ್ರಾಫಿಕ್‌ ಉಳಿಸುವ ಹಾಗೆ ಮಾಡುತ್ತೇವೆ,'' ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ