ಆ್ಯಪ್ನಗರ

ಸಿದ್ದರಾಮಯ್ಯಗೆ ಕ್ಯಾಬಿನೆಟ್‌ ದರ್ಜೆ

ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ಸಿಎಂ ಎಚ್‌ಡಿ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.

Vijaya Karnataka 25 Jun 2018, 7:42 am
ಬೆಂಗಳೂರು : ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.
Vijaya Karnataka Web SIDDARAMAYYA


ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರಕಾರವನ್ನು ಭದ್ರವಾಗಿಟ್ಟುಕೊಳ್ಳಲು ಸಾಧ್ಯವಿಲ್ಲ ಎನ್ನುವುದು ಎಚ್‌ಡಿಕೆ ಅವರಿಗೆ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಯೋಚನೆ ಮಾಡಿದ್ದು ಶೀಘ್ರದಲ್ಲೆ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಬೆಳವಣಿಗೆಗೆ ಪುಷ್ಟಿ ನೀಡುವಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಾ.ಜಿ. ಪರಮೇಶ್ವರ, ''ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್‌ ರಾರ‍ಯಂಕ್‌ ನೀಡಿದ ನಿದರ್ಶನ ದಿಲ್ಲಿಯಲ್ಲಿದೆ. ಅದೇ ಮಾದರಿಯಲ್ಲಿ ಇಲ್ಲಿಯೂ ಕೊಡಬಹುದು. ಈ ಬಗ್ಗೆ ಸಿಎಂ ಮತ್ತು ನಾನು ತೀರ್ಮಾನ ಮಾಡುತ್ತೇವೆ,'' ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ