ಆ್ಯಪ್ನಗರ

ಸಿಂದಗಿ, ಹಾನಗಲ್ ಉಪಚುನಾವಣೆ: ಸಚಿವರಿಗೆ ಬೊಮ್ಮಾಯಿ ಕೊಟ್ಟಿದ್ದಾರೆ ಟಾಸ್ಕ್!

ಸಿಂದಗಿ ಮತ್ತು ಹಾನಗಲ್‌ ಉಪಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಪಾಲಿಗೆ ಪ್ರತಿಷ್ಠಿತವಾಗಿದ್ದು, ಉಸ್ತುವಾರಿ ಹೊಣೆ ಹೊತ್ತುಕೊಂಡ ಸಚಿವರಿಗೆ ಮುಖ್ಯಮಂತ್ರಿಗಳು ಟಾಸ್ಕ್ ನೀಡಿದ್ದಾರೆ. ಬಹುತೇಕ ಸಚಿವರು ಎರಡೂ ಕ್ಷೇತ್ರಗಳಲ್ಲಿ ಬೀಡು ಬಿಟ್ಟಿದ್ದು ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 25 Oct 2021, 2:04 pm

ಹೈಲೈಟ್ಸ್‌:

  • ಸಿಎಂ ಬಸವರಾಜ ಬೊಮ್ಮಾಯಿ ಪಾಲಿಗೆ ಪ್ರತಿಷ್ಠಿತವಾಗಿರುವ ಸಿಂದಗಿ ಮತ್ತು ಹಾನಗಲ್‌ ಉಪಚುನಾವಣೆ
  • ಉಸ್ತುವಾರಿ ಹೊಣೆ ಹೊತ್ತುಕೊಂಡ ಸಚಿವರಿಗೆ ಟಾಸ್ಕ್ ನೀಡಿದ ಮುಖ್ಯಮಂತ್ರಿಗಳು
  • ಎರಡೂ ಕ್ಷೇತ್ರಗಳಲ್ಲಿ ಬೀಡು ಬಿಟ್ಟಿರುವ ಬಹುತೇಕ ಸಚಿವರು
    ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಸಿಎಂ ಬೊಮ್ಮಾಯಿ
  • ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಸಿಎಂ ಬೊಮ್ಮಾಯಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆ ಅಖಾಡ ರಂಗೇರಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು ಕೊನೆಯ ಹಂತದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಅದರಲ್ಲೂ ಉಪಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಪಾಲಿಗೆ ಪ್ರತಿಷ್ಠಿತವಾಗಿದ್ದು, ಈ ಹಿನ್ನೆಲೆಯಲ್ಲಿ ಉಸ್ತುವಾರಿ ಹೊಣೆ ಹೊತ್ತುಕೊಂಡ ಸಚಿವರಿಗೆ ಟಾಸ್ಕ್ ನೀಡಿದ್ದಾರೆ. ಬಹುತೇಕ ಸಚಿವರು ಎರಡೂ ಕ್ಷೇತ್ರಗಳಲ್ಲಿ ಬೀಡು ಬಿಟ್ಟಿದ್ದು, ಸ್ವತಃ ಸಿಎಂ ಬೊಮ್ಮಾಯಿ ಕೂಡಾ ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಸಚಿವರಾದ ಮುರುಗೇಶ್ ನಿರಾಣಿ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ, ಶಿವರಾಮ್ ಹೆಬ್ಬಾರ್ ಜೊತೆಗೆ ಸಂಸದ ಶಿವಕುಮಾರ್ ಉದಾಸಿ, ಎನ್. ರವಿಕುಮಾರ್, ಮಹೇಶ್ ಟೆಂಗಿನಕಾಯಿ, ರಾಜುಗೌಡ, ನೆಹರೂ ಓಲೇಕಾರ್, ಎಂ. ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಗುತ್ತೂರು ಜೊತೆಗೆ ಬಿ.ವೈ. ವಿಜಯೇಂದ್ರ ಅವರಿಗೆ ನೀಡಲಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿಯನ್ನು ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್‌, ಶಶಿಕಲಾ ಜೊಲ್ಲೆ, ಜೊತೆಗೆ ರಮೇಶ್ ಜಿಗಜಿಣಗಿ, ಸಿದ್ದರಾಜು, ಬಸವನಗೌಡ ಪಾಟೀಲ ಯತ್ನಾಳ್‌, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ, ಎ.ಎಸ್. ಪಾಟೀಲ್‌ ನಡಹಳ್ಳಿ, ಪಿ. ರಾಜೀವ್, ಶ್ರೀಕಾಂತ ಕುಲಕರ್ಣಿ, ಬಾಬುರಾವ ಚಿಂಚನಸೂರ ಅವರಿಗೆ ವಹಿಸಲಾಗಿದೆ.

ಉಪಚುನಾವಣೆ ಗೆಲ್ಲಲು ಸರ್ಕಾರ ವಿಧಾನಸೌಧಕ್ಕೆ ಬೀಗ ಹಾಕಿದೆ: ಡಿಕೆಶಿ ಆರೋಪ!
ಇವರ ಜೊತೆ ಸಂಪುಟದ ಇತರ ಸಚಿವರು ಕೂಡಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕಾರಣದಿಂದಾಗಿ ವಿಧಾನಸೌಧ ಖಾಲಿ ಖಾಲಿಯಾಗಿದೆ. ಸಿಎಂ ಆದಿಯಾಗಿ ಸಚಿವರು ಉಪಚುನಾವಣೆಯಲ್ಲಿ ಬ್ಯುಸಿಯಾಗಿರುವುದರಿಂದ ಪ್ರಮುಖ ಸಭೆಗಳು ಕೂಡಾ ನಡೆಯುತ್ತಿಲ್ಲ.

ಬಿಜೆಪಿಯ ಈ ನಡೆಗೆ ವಿರೋಧ ಪಕ್ಷಗಳು ತಿವ್ರ ಆಕ್ಷೇಪ ವ್ಯಕ್ತಪಡಿಸಿವೆ. ಉಪಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಬೀಗ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್, "ಜನಪರ‌ ಆಡಳಿತ ನೀಡಿದ್ದರೆ, ಕೋವಿಡ್ - 19 ಸಂಕಷ್ಟದಲ್ಲಿ ಜನರಿಗೆ ನೆರವಾಗಿದ್ದರೆ, ರೈತರು, ಕಾರ್ಮಿಕರು, ಸಂತ್ರಸ್ತರಿಗೆ ಪರಿಹಾರ ನೀಡಿದ್ದರೆ, ಬೆಡ್ ಬ್ಲಾಕಿಂಗ್, ಕೊರೊನಾ ಹೆಣದ ಮೇಲೆ ಹಣ ಮಾಡದಿದ್ದರೆ, ಇಡೀ ಮಂತ್ರಿಮಂಡಲವೇ ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಬಿಡಾರ ಹೂಡುವ ಪರಿಸ್ಥಿತಿ ಬಿಜೆಪಿಗೆ ಬರುತ್ತಿರಲಿಲ್ಲ," ಎಂದು ಲೇವಡಿ ಮಾಡಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ