ಆ್ಯಪ್ನಗರ

ಕೊರೊನಾ ಮುನ್ನೆಚ್ಚರಿಕೆ: ಬಿಎಸ್‌ವೈ ಕ್ಯಾಬಿನೆಟ್ ಸಭೆಯಲ್ಲಿ ಸಾಮಾಜಿಕ ಅಂತರ

ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿದೆ. ಕೊರೊನಾ ಕಾರಣಕ್ಕಾಗಿ ಕ್ಯಾಬಿನೆಟ್‌ ಹಾಲ್‌ನಲ್ಲಿ ನಡೆಯಬೇಕಾಗಿದ್ದ ಸಂಪುಟ ಸಭೆಯನ್ನು ಸಮ್ಮೇಳನ ಸಭಾಂಗಣಕ್ಕೆ ವರ್ಗಾಯಿಸಲಾಯಿತು.

Vijaya Karnataka Web 27 Mar 2020, 12:35 pm
ಬೆಂಗಳೂರು: ಕೊರೊನಾ ಹರಡದಂತೆ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿದೆ. ವಿಧಾನಸೌಧದ ವಿಶಾಲವಾದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತಾಗಿ ಮಹತ್ವದ ಚರ್ಚೆಗಳು ನಡೆದವು.
Vijaya Karnataka Web cabinet meeting


ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸರ್ಕಾರ ಸೂಚನೆಯನ್ನು ನೀಡುತ್ತಿದೆ.

ಇಂಟರ್‌ನೆಟ್‌ ಸ್ಥಗಿತಕ್ಕೆ ಸರ್ಕಾರ ಚಿಂತನೆ ! ಎಚ್‌ .ಕೆ ಪಾಟೀಲ್‌ ಬಿಎಸ್‌ವೈಗೆ ಬರೆದ ಪತ್ರದಲ್ಲಿ ಏನಿದೆ?

ಅಷ್ಟೇ ಅಲ್ಲದೆ ಸರ್ಕಾರದ ಸಭೆಗಳನ್ನು ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಯಿತು.

ಸಾಮಾನ್ಯವಾಗಿ ಸಚಿವ ಸಂಪುಟ ಸಭೆ ಕ್ಯಾಬಿನೆಟ್‌ ಹಾಲ್‌ನಲ್ಲಿ ನಡೆಸಲಾಗುತ್ತದೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಿಎಂ ಕಚೇರಿ ಎದುರು ಸಂಪುಟ ಸಭೆ ನಡೆಸಲು ಪ್ರತ್ಯೇಕ ಸಭಾಂಗಣವಿದೆ. ಆದರೆ ಕೊರೊನಾ ಮುಂಜಾಗ್ರತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ವಿಶಾಲವಾದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಸಂಪುಟ ಸಭೆ ನಡೆಸಲಾಯಿತು.

ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ರಾಜ್ಯದಲ್ಲಿ 55ಕ್ಕೇರಿದ ಸೋಂಕಿತ ಪ್ರಕರಣ

ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಾಯಿತು. ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಹಾಗೂ ಸೋಂಕಿತರ ಆರೋಗ್ಯ ಸ್ಥಿತಿ ಕುರಿತಾಗಿಯೂ ಚರ್ಚೆ ನಡೆದಿದೆ.

ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಲ್ಲಾ ಸಚಿವರು ಇದಕ್ಕಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಸಂಪುಟ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ