ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಡಿಜಿಟಲ್‌, ಸ್ಮಾರ್ಟ್‌ ವಾಚ್‌ ಬಳಕೆ ನಿಷೇಧ

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ 'ಡಿಜಿಟಲ್‌ ಮತ್ತು ಸ್ಮಾರ್ಟ್‌' ಕೈ ಗಡಿಯಾರ ಬಳಸುವುದನ್ನು ...

Vijaya Karnataka 28 Dec 2018, 5:00 am
ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ 'ಡಿಜಿಟಲ್‌ ಮತ್ತು ಸ್ಮಾರ್ಟ್‌' ಕೈ ಗಡಿಯಾರ ಬಳಸುವುದನ್ನು ನಿಷೇಧಿಸಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಬದಲಿಗೆ, ಅನ್‌ಲಾಗ್‌ ಅಥವಾ ಮೆಕ್ಯಾನಿಕಲ್‌ ಕೈ ಗಡಿಯಾರಗಳನ್ನು ಮಾತ್ರ ಬಳಸಲು ಅವಕಾಶ ಕಲ್ಪಿಸಿದೆ.
Vijaya Karnataka Web neet


''ಪರೀಕ್ಷಾ ಸಂದರ್ಭದಲ್ಲಿ ಸಮಯ ಪಾಲನೆಗಾಗಿ ವಿದ್ಯಾರ್ಥಿಗಳು ಕೈ ಗಡಿಯಾರ ಬಳಕೆ ಅವಶ್ಯಕವಾಗಿರುತ್ತದೆ. ಆದರೆ, ಡಿಜಿಟಲ್‌ ಅಥವಾ ಸ್ಮಾರ್ಟ್‌ ಕೈಗಡಿಯಾರಗಳನ್ನು ಬಳಸಲು ಅವಕಾಶ ಕಲ್ಪಿಸಿದರೆ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರೇರೇಪಿಸಿದಂತಾಗುತ್ತದೆ. ಹಾಗಾಗಿ, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಡಿಜಿಟಲ್‌ ಮತ್ತು ಸ್ಮಾರ್ಟ್‌ ವಾಚ್‌ಗಳನ್ನು ಧರಿಸಿ ಪರೀಕ್ಷೆ ಬರೆಯುವಂತಿಲ್ಲ,'' ಎಂದು ಮಂಡಳಿಯ ಅಧ್ಯಕ್ಷ ಡಾ. ಪಿ.ಸಿ.ಜಾಫರ್‌ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ