ಆ್ಯಪ್ನಗರ

ಸೆ. 3ನೇ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಸೆಪ್ಟೆಂಬರ್ 3ನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.

Vijaya Karnataka Web 31 Aug 2018, 10:28 pm
ಬೆಂಗಳೂರು: ಸೆಪ್ಟೆಂಬರ್ 3ನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.
Vijaya Karnataka Web cm commitee.


ಶುಕ್ರವಾರ ಬೆಂಗಳೂರಿನಲ್ಲಿ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ನ ಆರು ಮತ್ತು ಜೆಡಿಎಸ್‌ನ ಒಂದು ಶಾಸಕರಿಗೆ ಸ್ಥಾನ ಲಭ್ಯವಾಗಲಿದೆ. ಜತೆಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ. ಹಲವು ಮಂದಿ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ 20 ಮತ್ತು ಜೆಡಿಎಸ್‌ನ 10 ಶಾಸಕರಿಗೆ ಮಂತ್ರಿಮಂಡಲ ವಿಸ್ತರಣೆಯ ಸಂದರ್ಭದಲ್ಲೇ ಮಂಡಳಿಗಳ ಸ್ಥಾನ ನೀಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದಿದ್ದಾರೆ.

ಜತೆಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡಿದ್ದು, ಬಹುಮತ ಪಡೆದ ಪಕ್ಷ ಅಧ್ಯಕ್ಷ ಸ್ಥಾನ ಪಡೆದುಕೊಳ್ಳಲಿದೆ. ಉಳಿದಂತೆ ಸರಕಾರದ ವಿವಿಧ ಸಮಸ್ಯೆ ಮತ್ತು ಮುಂದಿನ ಯೋಜನೆಗಳ ಬಗ್ಗೆಯೂ ಸಮಿತಿ ಗಮನ ಹರಿಸಲಿದೆ. ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಯೋಜನೆಯಡಿ ಸರಕಾರ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಳಿದಂತೆ ಸರಕಾರದ ಬಗ್ಗೆ ಬರುತ್ತಿರುವ ಎಲ್ಲ ಊಹಾಪೋಹಗಳು ಆಧಾರರಹಿತ, ಸರಕಾರ ತನ್ನ ಅವಧಿ ಪೂರೈಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ